ಚಿತ್ರದುರ್ಗ:
ನರೇಂದ್ರಮೋದಿ ಮತ್ತೊಮ್ಮೆ ದೇಶಕ್ಕೆ ಪ್ರಧಾನಿಯಾಗಬೇಕಾಗಿರುವುದರಿಂದ ಚಿತ್ರದುರ್ಗ ಲೋಕಸಭಾ ಕ್ಷೇತ್ರದಿಂದ ಬಿಜೆಪಿ.ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಎ.ನಾರಾಯಣಸ್ವಾಮಿಗೆ ಬೆಂಬಲಿಸಿ ಗೆಲುವಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆಂದು ಸೂರನಹಳ್ಳಿ ವಿಜಯಕುಮಾರ್ ತಿಳಿಸಿದರು.
ಐಶ್ವರ್ಯಫೋರ್ಟ್‍ನಲ್ಲಿ ಮಂಗಳವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಹದಿನೆಂಟರಿಂದ ಇಪ್ಪತ್ತು ಮಂದಿ ಟಿಕೇಟ್ ಆಕಾಂಕ್ಷಿಗಳಿದ್ದರು. ಅದರಲ್ಲಿ ನಾನು ಕೂಡ ಒಬ್ಬನಾಗಿದ್ದೆ. ಆದರೆ ಪಕ್ಷದ ವರಿಷ್ಟರು ನಾರಾಯಣಸ್ವಾಮಿಯನ್ನು ಅಭ್ಯರ್ಥಿಯನ್ನಾಗಿ ಘೋಷಿಸಿ ಕಣಕ್ಕಿಳಿಸಿರುವುದರಿಂದ ನಾನು ಮತ್ತು ನನ್ನ ಬೆಂಬಲಿಗರು ಅವರ ಪರವಾಗಿ ಕೆಲಸ ಮಾಡುತ್ತೇವೆ. ನಾನು ಕೂಡ ಪ್ರಬಲ ಆಕಾಂಕ್ಷಿಯಾಗಿದ್ದರಿಂದ ಚಿತ್ರದುರ್ಗ ಲೋಕಸಭೆಯ ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿ ಸುತ್ತಾಡಿ ಕಾರ್ಯಕರ್ತರು, ಮತದಾರರು ಹಾಗೂ ಮಠಾಧೀಶರುಗಳನ್ನು ಭೇಟಿ ಮಾಡಿದ್ದೆ. ಹೈಕಮಾಂಡ್ ತೆಗೆದುಕೊಂಡಿರುವ ತೀರ್ಮಾನಕ್ಕೆ ಬದ್ದನಾಗಿ ಅಭ್ಯರ್ಥಿ ಎ.ನಾರಾಯಣಸ್ವಾಮಿರವರನ್ನು ಗೆಲ್ಲಿಸಿ ದೇಶದಲ್ಲಿ ಮತ್ತೊಮ್ಮೆ ಮೋದಿರವರನ್ನು ಪ್ರಧಾನಿಯನ್ನಾಗಿ ಮಾಡುವುದು ನಮ್ಮ ಮುಂದಿರುವ ಗುರಿ. ಹಾಗಾಗಿ ಕ್ಷೇತ್ರದ ಮತದಾರರು ನಾರಾಯಣಸ್ವಾಮಿರವರನ್ನು ಗೆಲ್ಲಿಸಿ ಪಾರ್ಲಿಮೆಂಟ್‍ಗೆ ಕಳಿಸಿಕೊಡಿ ಎಂದು ವಿನಂತಿಸಿದರು.
ನಾಲ್ಕುವರೆ ವರ್ಷಗಳ ಕಾಲ ದೇಶದ ಪ್ರಧಾನಿಯಾಗಿ ಸ್ವಚ್ಚ ಹಾಗೂ ಪಾರದರ್ಶಕ ಆಡಳಿತ ನೀಡಿದ ನರೇಂದ್ರಮೋದಿರವರ ತತ್ವ ಸಿದ್ದಾಂತಗಳನ್ನು ಮೆಚ್ಚಿ ಜನಸೇವೆ ಮಾಡಬೇಕೆಂಬ ಆಸೆಯಿಂದ ಬ್ಯಾಂಕ್ ನೌಕರಿಗೆ ರಾಜೀನಾಮೆ ನೀಡಿ ಹೊರ ಬಂದೆ. ಪಕ್ಷ ಟಿಕೇಟ್ ನೀಡಲಿಲ್ಲವೆಂದು ಬೇಸರಪಟ್ಟುಕೊಳ್ಳದೆ ಅಭ್ಯರ್ಥಿ ಎ.ನಾರಾಯಣಸ್ವಾಮಿರವರ ಗೆಲುವಿಗಾಗಿ ದುಡಿಯುತ್ತೇನೆ. ಬರದನಾಡು ಚಿತ್ರದುರ್ಗ ಜಿಲ್ಲೆಯಲ್ಲಿ ಅನೇಕ ಜ್ವಲಂತ ಸಮಸ್ಯೆಗಳಿವೆ ಮೊದಲು ನೀರಾವರಿ ಯೋಜನೆಗೆ ಆದ್ಯತೆ ನೀಡಬೇಕು. ಉತ್ತರ ಕರ್ನಾಟಕ ಹಾಗೂ ದಕ್ಷಿಣ ಕರ್ನಾಟಕದಲ್ಲಿ ಪ್ರಭಾವಿ ರಾಜಕಾರಣಿಗಳಿರುವುದರಿಂದ ಸರ್ಕಾರದ ಎಲ್ಲಾ ಸವಲತ್ತುಗಳನ್ನು ಬಳಸಿಕೊಳ್ಳುತ್ತಾರೆ. ಚಿತ್ರದುರ್ಗ ಜಿಲ್ಲೆ ನಿರ್ಲಕ್ಷೆಗೊಳಪಡುತ್ತಲೇ ಬರುತ್ತಿದೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಎ.ನಾರಾಯಣಸ್ವಾಮಿ ಜಯಶಾಲಿಯಾದರೆ ಜಿಲ್ಲೆ ಸರ್ವತೋಮುಖ ಅಭಿವೃದ್ದಿಯಾಗುವುದರಲ್ಲಿ ಅನುಮಾನವಿಲ್ಲ ಎಂದು ಹೇಳಿದರು.
ಜನ್‍ಧನ್ ಯೋಜನೆ, ಉಜ್ವಲ ಯೋಜನೆ, ಆಯುಷ್ಮಾನ್ ಭಾರತ್ ಹೀಗೆ ನೂರಾರು ಯೋಜನೆಗಳನ್ನು ದೇಶದ ಬಡಜನರಿಗೆ ಕೊಡುಗೆಯಾಗಿ ನೀಡಿರುವ ನರೇಂದ್ರಮೋದಿರವರ ಕ್ರಾಂತಿಕಾರಿ ಯೋಜನೆ ಹಾಗೂ ದಿಟ್ಟ ಹೆಜ್ಜೆಗಳು ದೇಶವೇ ಮೆಚ್ಚುವಂತಿದೆ. ಅಭ್ಯರ್ಥಿ ಎ.ನಾರಾಯಣಸ್ವಾಮಿ ಯಾವುದೇ ಜಾತಿಯ ವಿರೋಧಿಯಲ್ಲ. ಸದಾಶಿವ ಆಯೋಗದ ವಿರೋಧಿ ಎನ್ನುವುದಾಗಿ ಕೆಲವರು ಅಪಪ್ರಚಾರ ಮಾಡುತ್ತಿದ್ದಾರೆ. ಭೋವಿ ಸಮಾಜ ಬಿಜೆಪಿ.ವಿರುದ್ದ ಮತಚಲಾಯಿಸುವುದಾಗಿ ತೀರ್ಮಾನಿಸಿದ್ದರೆ ಇಮ್ಮಡಿಸಿದ್ದರಾಮೇಶ್ವರ ಸ್ವಾಮಿ ಜೊತೆ ಚರ್ಚಿಸಿ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ.ಅಭ್ಯರ್ಥಿ ಎ.ನಾರಾಯಣಸ್ವಾಮಿಗೆ ಬೆಂಬಲಿಸುವಂತೆ ಮನವಿ ಮಾಡುತ್ತೇನೆ ಎಂದು ಭರವಸೆ ನೀಡಿದರು.ಹಿರೇಹಳ್ಳಿ ಗ್ರಾ.ಪಂ.ಮಾಜಿ ಸದಸ್ಯ ಬಸವರಾಜ್, ಬೋರಣ್ಣ, ಮುತ್ತುರಾಜ್ ಪತ್ರಿಕಾಗೋಷ್ಟಿಯಲ್ಲಿ ಹಾಜರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
