ಬೆಂಗಳೂರು:
ಇಷ್ಟು ದಿನ ಆಪರೇಷನ್ ಕಮಲ ಮತ್ತು ಇನ್ನಿತರ ವಿದ್ಯಮಾನಗಳಲ್ಲಿ ಬ್ಯುಸಿಯಾಗಿದ್ದ ಕಮಲ ಟೀಮ್ ಈಗ ಬರ ಪೀಡಿತ ಪ್ರದೇಶಗಳ ಪ್ರವಾಸಕ್ಕೆ ಮುಂದಾಗಿದೆ.
ನಾಳೆಯಿಂದ ಬರ ವೀಕ್ಷಣೆ ಜೊತೆಗೆ ಪಕ್ಷ ಬಲವರ್ಧನೆ ಕಾರ್ಯ ಎರಡನ್ನು ಮಾಡಲು ಬಿಜೆಪಿ ಮುಂದಾಗಿರುವುದು ಕಾಣುತ್ತಿದೆ .ಮೊದಲಿಗೆ ಬೆಳಿಗ್ಗೆ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲ್ಲೂಕಿನಲ್ಲಿ ಕುರುಡುಮಲೆ ಗಣೇಶ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ತಂಡ ಬರಗಾಲ ಪೀಡಿತ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಳ್ಳಲಿದೆ ಎಂದು ಬಿಜೆಪಿ ವಕ್ತಾರರು ತಿಳಿಸಿದ್ದಾರೆ.
ಸರ್ಕಾರ ಕೈಗೊಂಡಿರುವ ಬರ ಜಿಲ್ಲೆಗಳ ಪರಿಹಾರಗಳ ಬಗ್ಗೆ ಜಿಲ್ಲಾಧಿಕಾರಿ ಮತ್ತು ಇತರ ಅಧಿಕಾರಿಗಳೊಂದಿಗೆ ಮಾಹಿತಿ ಪಡೆಯಲು ಬಿಜೆಪಿ ಪ್ರಯತ್ನ ನಡೆಸಲಿದೆ ಎಂದು ತಿಳಿದು ಬಂದಿದೆ . ಈ ಕುರಿತು ಪ್ರಕಟಣೆ ಹೊರಡಿಸಿರುವ ಬಿಜೆಪಿ ನಾಳೆಯೇ ಚಿಕ್ಕಬಳ್ಳಾಪುರ ಜಿಲ್ಲೆಗೆ ಭೇಟಿ ನೀಡಿ ಅಲ್ಲಿನ ಜಿಲ್ಲಾಧಿಕಾರಿಗಳಿಂದ ಮಾಹಿತಿ ಪಡೆಯಲಿದ್ದಾರೆ ಎಂದು ಮಾಹಿತಿ ಲಬ್ಯವಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
