ಹಾವೇರಿ:
ಕಳೆದ ನಾಲ್ಕುವರೆ ವರ್ಷದ ಕೇಂದ್ರದಲ್ಲಿ ಅಧಿಕಾರ ನಡೆಸುತ್ತಿರುವ ಬಿಜೆಪಿ ಸರಕಾರದ ವೈಪಲ್ಯಗಳು 2019 ರಲ್ಲಿ ಕಾಂಗ್ರೆಸ್ ಪಕ್ಷದ ಗೆಲುವಿನ ಮೆಟ್ಟಿಲುಗಳಾಗಲಿವೆ ಎಂದು ಎಐಸಿಸಿ ಕಾರ್ಯದರ್ಶಿ ಸಲೀಂ ಅಹ್ಮದ್ ತಿಳಿಸಿದರು.
ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಎರಡು ವರ್ಷಗಳಿಂದ ದೇಶದಲ್ಲಿ ಮೋದಿ ವರ್ಚಸ್ಸು ಕಳೆಗುಂದಿದೆ. ಬಿಜೆಪಿ 2014 ರಲ್ಲಿ ನಡೆದ ಚುನಾವಣೆಯಲ್ಲಿ ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸುವಲ್ಲಿ ವಿಫಲವಾಗಿದೆ. ಇದರಿಂದ ದೇಶದ ಜನತೆ ಬಿಜೆಪಿ ಮೇಲಿನ ನಂಬಿಕೆಯನ್ನು ಕಳೆದುಕೊಂಡಿದ್ದಾರೆ. ಬಿಜೆಪಿ ಸರಕಾರ ವೈಪಲ್ಯಗಳು 2019 ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಗೆಲುವಿಗೆ ಮೆಟ್ಟಿಲುಗಳಾಗಲಿವೆ.
ದೇಶದಲ್ಲಿ ಕಾಂಗ್ರೆಸ್ ಪರ ಒಲವು: ದೇಶದ ಯುವಕರು, ನಾಗರಿಕರು 2014 ರಲ್ಲಿ ಮೋದಿ ಮೇಲೆ ಇಟ್ಟಿದ್ದ ನಂಬಿಕೆಯನ್ನು ಇಂದು ಕಳೆದುಕೊಂಡಿದ್ದಾರೆ. ಮೋದಿ ಅಧಿಕಾರಕ್ಕೆ ಬಂದರೆ, ಹೆಚ್ಚಿನ ಉದ್ಯೋಗ ಸೃಷ್ಠಿಯಾಗುತ್ತದೆ. ನಿರುದ್ಯೋಗ ಸಮಸ್ಯೆಗೆ ನಿವಾರಣೆಯಾಗುತ್ತದೆ ಎಂಬ ನಂಬಿಕೆಯಿಂದ ಯುವಕರು ಮೋದಿಯನ್ನು ಪ್ರಧಾನಿಯಾಗಿ ಆಯ್ಕೆ ಮಾಡಿದರು. ಮೋದಿ ಅವರು ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಠಿಸುವೆ ಎಂದು ಹೋದೆಲ್ಲೆಲ್ಲಾ ಹೇಳಿಕೊಂಡು ಬಂದಿದ್ದರು.
ಆದರೆ, ವರ್ಷಕ್ಕೆ 2 ಲಕ್ಷ ಉದ್ಯೋಗ ಸೃಷ್ಠಿಸುವಂತ ಕೆಲಸ ಮಾಡಿಲ್ಲ. ಇನ್ನು ಅಧಿಕಾರಕ್ಕೆ ಬಂದು 100 ದಿನಗಳಲ್ಲಿ ವಿದೇಶದಲ್ಲಿರುವ ಕಪ್ಪು ಹಣವನ್ನು ತಂದು ಬಡತನ ನಿವಾರಣೆ ಮಾಡುತ್ತೇನೆ ಎಂದ ಮೋದಿ ದೇಶದ ಅರ್ಥ ವ್ಯವಸ್ಥೆಯನ್ನು ದಿವಾಳಿಯಾಗುವಂತ ತಿರ್ಮಾನ ತೆಗೆದುಕೊಂಡಿದ್ದಾರೆ. ಮೋದಿಯ ಈ ನಡೆಯಿಂದ ದೇಶದ ಜನರ ಭರವಸೆ ಕಳೆದುಕೊಂಡಿದ್ದಾರೆ. ಆ ಮೂಲಕ ಬಿಜೆಪಿ ಪಕ್ಷದ ಪರ್ಯಾಯವಾಗಿ ಕಾಂಗ್ರೆಸ್‍ಗೆ ಬೆಂಬಲಿಸುತ್ತಿದ್ದಾರೆ. ದೇಶದಲ್ಲಿ ಕಾಂಗ್ರೆಸ್ ಪರವಾದ ಅಲೆ ಆರಂಭವಾಗಿದೆ ಎಂದು ತಿಳಿಸಿದರು.
ಪಂಚರಾಜ್ಯಗಳ ಪಲಿತಾಂಶ 2019 ರ ಚುನಾವಣೆಯ ಧಿಕ್ಸೂಚಿ: ಸಧ್ಯ ನಡೆಯುತ್ತಿರುವ ಪಂಚರಾಜ್ಯಗಳ ಚುನಾವಣೆಯು ಮುಂಬರುವ 2019 ಲೋಕಸಭಾ ಚುನಾವಣೆಯ ಧಿಕ್ಸೂಚಿಯಾಗಲಿದೆ. ಈಗ ನಡೆಯುತ್ತಿರುವ ಚುನಾವಣೆಯಲ್ಲಿ ಅಲ್ಲಿನ ಜನರು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲವಾಗಿ ನಿಂತಿದ್ದಾರೆ. ಕೇಂದ್ರದಲ್ಲಿ ಹಾಗೂ ಆಯಾ ರಾಜ್ಯದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ವಾಮ ಮಾರ್ಗದ ಮೂಲಕ ಅಧಿಕಾರಕ್ಕೆ ಬರುವ ಹುನ್ನಾರ ನಡೆಸಿದ್ದರು, ಜನರು ಮಾತ್ರ ಕಾಂಗ್ರೆಸ್ ಪರವಾಗಿ ನಿಂತಿದ್ದಾರೆ ಎಂದ ವಿಶ್ವಾಸ ವ್ಯಕ್ತಪಡಿಸಿರು.
ಬಿಜೆಪಿ ಮಣಿಸಲು ಜಾತ್ಯಾತೀತ ಪಕ್ಷಗಳು ಒಕ್ಕೂಟ
ಕೋಮವಾದಿ ಬಿಜೆಪಿಯನ್ನು ದೇಶದಲ್ಲಿ ಅಧಿಕಾರದಿಂದ ಕಿತ್ತೋಗೆಲು, ಜಾತ್ಯಾತೀತ ಶಕ್ತಿಗಳು ಒಗ್ಗೂಡುವದು ತಪ್ಪಲ್ಲ ಎಂದ ಸಲಿಂ ಅಹ್ಮದ, ದೇಶದಲ್ಲಿರುವ ಪ್ರಾದೇಶಿಕ ಪಕ್ಷದ ಎಚ್.ಡಿ.ದೇವೆಗೌಡ್ರು ಸೇರಿದಂತೆ ಮುಖಂಡರು ರಾಹುಲ್ ಗಾಂಧಿ ನೇತೃತ್ವದಲ್ಲಿ ಲೋಕಸಭಾ ಚುನಾವಣೆ ಎದುರಿಸಲು ಮುಂದಾಗಿದ್ದಾರೆ. ಓಟ್ಟಾರೆ, 2019 ರಲ್ಲಿ ಬಿಜೆಪಿಯನ್ನು ಅಧಿಕಾರದಿಂದ ದೂರ ಇಡುವದು ಶತ ಸಿದ್ಧ ಎಂದು ತಿಳಿಸಿದರು.
ನಾನು ಚುನಾವಣೆಗೆ ಸಿದ್ದ, ಹೈ ಕಮಾಂಡ್ ತಿರ್ಮಾನಕ್ಕೆ ಬದ್ಧ : ಜಿಲ್ಲೆಯ ಜನರೊಂದಿಗೆ ಕಳೆದ 20 ವರ್ಷಗಳಿಂದ ಉತ್ತಮ ಸಂಬಂಧ ಹೊಂದಿರುವ, ಜಿಲ್ಲೆಯ ಅಭಿವೃಧಿ ವಿಚಾರದಲ್ಲಿ ಸಾಧ್ಯವಾದಷ್ಟು ಪ್ರಾಮಾಣಿಕ ಪ್ರಯತ್ನ ಮಾಡಿರುವೆ. ಆ ಕಾರಣದಿಂದ ಜಿಲ್ಲೆಯಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಪ್ರಮುಖ ಆಕಾಂಕ್ಷಿಯಾಗಿದ್ದೇನೆ. ಆದರೆ, ಪಕ್ಷದ ಹೈ ಕಮಾಂಡ್ ತೆಗೆದುಕೊಳ್ಳುವ ತಿರ್ಮಾನಕ್ಕೆ ಬದ್ಧ ಎನ್ನುವ ಮೂಲಕ ಲೋಕಸಭೆ ಚುನಾವಣೆಗೆ ರಣಕಹಳೆ ಊದಿದರು.
9 ವರ್ಷಗಳಲ್ಲಿ ಕ್ಷೇತ್ರದ ಅಭಿವೃದ್ಧಿ ಶೂನ್ಯ: ಸಂಸದ ಶಿವಕುಮಾರ ಉದಾಸಿ ಅವರು, ಜಿಲ್ಲೆಯಲ್ಲಿ ಕಳೆದ 9 ವರ್ಷಗಳಿಂದ ಲೋಕಸಭಾ ಸದಸ್ಯರಾಗಿದ್ದರೂ, ಜಿಲ್ಲೆಯಲ್ಲಿ ಯಾವುದೇ ಅಭಿವೃದ್ಧಿ ಪರ ಬದಲಾವಣೆ ಕಂಡಿಲ್ಲ. ಅವರು, ಕ್ಷೇತ್ರದ ಇರುವ ಸಮಯಕ್ಕಿಂದ ದೆಹಲಿ ಹಾಗೂ ಫಾರಿನ್ ಸುತ್ತಿದ್ದೇ ಹೆಚ್ಚು, ಈ ಕಾರಣದಿಂದ ಜಿಲ್ಲೆಯ ಜನರು ಬದಲಾವಣೆ ಬಯಸಿದ್ದಾರೆ. ಹಾವೇರಿ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯ ಗೆಲುವು ನಿಶ್ಚಿತ ಎಂದರು.
ಸುದ್ದಿಗೋಷ್ಠಿಯಲ್ಲಿ ಮಾಜಿ ಸಚಿವ ಮನೋಹರ ತಹಶೀಲ್ದಾರ, ಜಿಲ್ಲಾಧ್ಯಕ್ಷ ಎಂ.ಸಿ.ಶಿಡೇನೂರು, ಕಾಂಗ್ರೆಸ್ ಮುಖಂಡರಾದ ಎಸ್.ಆರ್.ಪಾಟೀಲ, ಎಸ್.ಎಫ್.ಎನ್.ಗಾಜೀಗೌಡ್ರ, ಕಾಂಗ್ರೆಸ್ ಪಕ್ಷದ ಜಿಲ್ಲಾ ಉಸ್ತುವಾರಿ ಜಯಸಿಂಹ, ಡಿ.ಬಸವರಾಜಪ್ಪ.ಎಂಎಂ ಮೈದೂರ. ಪ್ರಭುಗೌಡ್ರ ಭಿಷ್ಟನಗೌಡ್ರ ಸೇರಿದಂತೆ ಮುಂತಾದವರು ಹಾಜರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ







