ಬೆಂಗಳೂರು
ಭಾರತೀಯ ಜನತಾ ಪಾರ್ಟಿ ಅಭಿವೃದ್ಧಿ ಕಾರ್ಯಕ್ರಮಗಳನ್ನು ಹೊಂದಿಲ್ಲದ ಕಾರಣ, ಮತೀಯ ವಿಷಯಗಳನ್ನು ಪ್ರಸ್ತಾಪಿಸುತ್ತಿದೆ ಎಂದು ಪ್ರದೇಶ ಕಾಂಗ್ರೆಸ್ ಸಮತಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಟೀಕಿಸಿದ್ದಾರೆ.ಅವರು ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಬಿಜೆಪಿ 370ನೇ ವಿಧಿ, ಭಯೋತ್ಪಾದನೆ ಹಾಗೂ ರಾಷ್ಟ್ರೀಯ ಸುರಕ್ಷತೆ ಮತ್ತು ಇನ್ನಿತರ ಭಾವನಾತ್ಮಕ ವಿಷಯಗಳನ್ನು ಅವಲಂಬಿಸಿದೆ; ಆದರೆ, ದೇಶದಲ್ಲಿನ ಸಮಸ್ಯೆಗಳನ್ನು ಬಗೆಹರಿಸಲು ಕಳೆದ ಐದು ವರ್ಷಗಳಲ್ಲಿ ಯಾವುದೇ ಪ್ರಯತ್ನ ಮಾಡಿಲ್ಲ ಎಂದು ದೂರಿದರು.
ಕಗ್ಗಂಟಾಗಿರುವ ಅಯೋಧ್ಯೆ ವಿಷಯವನ್ನು ಪರಿಹರಿಸದ ಬಿಜೆಪಿ ಈಗ ರಾಮ ಮಂದಿರ ವಿಷಯವನ್ನು ಪ್ರಸ್ತಾಪಿಸುತ್ತಿದೆ ಎಂದು ಅವರು ಹೇಳಿದರು. ಗೋವಾದೊಂದಿಗಿನ ಮಹಾದಾಯಿ ನದಿ ನೀರು ವಿವಾದದಲ್ಲಿ ಮಧ್ಯ ಪ್ರವೇಶಕ್ಕೆ ನಿರಾಕರಿಸುವ ಮೂಲಕ, ಪ್ರಧಾನ ಮಂತ್ರಿ ಅವರು ಕರ್ನಾಟಕಕ್ಕೆ ನ್ಯಾಯ ಒದಗಿಸುವ ಅವಕಾಶವನ್ನು ಕಳೆದುಕೊಂಡಿದ್ದಾರೆ ಎಂದು ದಿನೇಶ್ ಗುಂಡೂರಾವ್ ಹೇಳಿದರು.
ರಾಜ್ಯದಲ್ಲಿ ಲಿಂಗಾಯಿತ ಸಮುದಾಯಕ್ಕೆ ಪ್ರತ್ಯೇಕ ಸ್ಥಾನ-ಮಾನ ವಿಷಯಕ್ಕೂ ಕಾಂಗ್ರೆಸ್ ಪಕ್ಷಕ್ಕೂ ಸಂಬಂಧವಿಲ್ಲ ಎಂದು ಅವರು ಹೇಳಿದರು.