ಬೆಂಗಳೂರು
ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿ ಸಂಜಯನಗರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಕಾಂಗ್ರೆಸ್ ನಾಯಕರ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿ ಮುಖಂಡರು, ರಾಜ್ಯ ಚುನಾವಣಾ ಆಯೋಗಗಕ್ಕೆ ದೂರು ಸಲ್ಲಿಸಿದರು.
ನಗರದ ಶೇಷಾದ್ರಿ ರಸ್ತೆಯ ಚುನಾವಣೆ ಆಯೋಗದ ಕಚೇರಿಯಲ್ಲಿ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಅವರಿಗೆ ಬಿಬಿಎಂಪಿ ಮಾಜಿ ಉಪಮೇಯರ್ ಎಸ್.ಹರೀಶ್ ದೂರು ಸಲ್ಲಿಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯ ಮಾಡಿದರು.
ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಹೆಬ್ಬಾಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮಹಿಳಾ ಉಪಾಧ್ಯಕ್ಷೆ ವಿದ್ಯಾ ಸೀನಪ್ಪ ಅವರ ಹುಟ್ಟು ಹಬ್ಬದಂದು ಸಂಜಯ್ ನಗರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಗೋಪಾಲ್ ನಾಯ್ಕ್ ಶುಭಾ ಕೋರಿದಲ್ಲದೆ, ಆಕೆಯ ಮನೆಗೆ ಸಮವಸ್ತ್ರ ದಲ್ಲೇ ತೆರಳಿ, ಅವರ ಜೊತೆ ಶಾಮೀಲು ಆಗಿದ್ದಾರೆ.ಗೋಪಾಲ್ ನಾಯ್ಕ್ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಮಾಡಿರುವುದಲ್ಲದೆ, ಬಿಜೆಪಿ ಕಾರ್ಯಕರ್ತರಿಗೆ ಬೆದರಿಕೆ ಹಾಕುತ್ತಾರೆ. ಈ ಸಂಬಂಧ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಿ ಅಮಾನತು ಮಾಡಬೇಕೆಂದು ಒತ್ತಾಯ ಮಾಡಿದರು.ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಮಹೇಶ್, ವಕೀಲ ವಿನೋದ್ ಕುಮಾರ್ ಸೇರಿದಂತೆ ಪ್ರಮುಖರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








