ಬಿಜೆಪಿಯದ್ದು ಪ್ರಜಾಪ್ರಭುತ್ವ ವಿರೋಧಿ ನಡೆ

ದಾವಣಗೆರೆ:

       ರಾಜ್ಯ ಸರ್ಕಾರವನ್ನು ಬೀಳಿಸುವ, ಅಸ್ಥಿರಗೊಳಿಸುವ ಪ್ರಯತ್ನ ಮಾಡುವ ಮೂಲಕ ಬಿಜೆಪಿ ಪ್ರಜಾಪ್ರಭುತ್ವ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಕಾರ್ಮಿಕ ಸಚಿವ ವೆಂಕಟರಮಣಪ್ಪ ತಿಳಿಸಿದರು.ನಗರದ ನಿಟುವಳ್ಳಿಯ ಇಎಸ್‍ಐ ಆಸ್ಪತ್ರೆ ಕಾರ್ಯಕ್ರಮಕ್ಕೆ ಆಗಮಿಸಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮ್ಮಿಶ್ರ ಸರ್ಕಾರವು ಸುಭದ್ರವಾಗಿದ್ದು, ಐದು ವರ್ಷ ಅವಧಿ ಪೂರೈಸುವುದರಲ್ಲಿ ಯಾವುದೇ ಅನುಮಾನವೂ ಇಲ್ಲ. ಆದರೆ, ಆಡಳಿತ ನಡೆಸಲು ಬಿಜೆಪಿಯವರು ಬಿಡುತ್ತಿಲ್ಲ ಎಂದು ಆರೋಪಿಸಿದರು.

         ನಿತ್ಯವೂ ಬಿಜೆಪಿಯವರ ಕಾಟ ಹೆಚ್ಚಾಗಿದೆ. ಸರ್ಕಾರ ಬೆಳಿಗ್ಗೆ ಬೀಳುತ್ತೆ, ಸಂಜೆ ಬೀಳುತ್ತೆ ಅಂತಾ ಹೇಳುತ್ತಲೇ ಇರುತ್ತಾರೆ. ಸರ್ಕಸ್ ಮಾಡುವುದಕ್ಕೆ ಹೋಗಿ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಸ್ವತಃ ಸಿಕ್ಕಿ ಹಾಕಿಕೊಂಡಿದ್ದಾರೆ. ಬಿಜೆಪಿ ಸರ್ಕಾರ ಕೆಡವಲು ಹವಣಿಸುತ್ತಿದೆಯೆಂಬುದಕ್ಕೆ ಆಡಿಯೋ ಪ್ರಕರಣವೇ ಸಾಕ್ಷಿಯಾಗಿದೆ. ಇದಕ್ಕಿಂತಲೂ ಬೇರೆ ಸಾಕ್ಷಿ ಬೇಕೆ? ಎಂದು ಪ್ರಶ್ನಿಸಿದರು.

          ಮಾಡುವುದೆಲ್ಲವನ್ನೂ ಮಾಡಿ, ಈಗ ಬೇಲ್‍ಗಾಗಿ ಯಡಿಯೂರಪ್ಪ ಇತರರು ಓಡಾಡುತ್ತಿದ್ದಾರೆ. ಇದನ್ನೆಲ್ಲಾ ಬಿಟ್ಟು, ನಮ್ಮನ್ನು ಆಡಳಿತ ಮಾಡಲು ಬಿಡಿ. ಸರ್ಕಾರದ ಬಗ್ಗೆ ಜನರೇ ತೀರ್ಮಾನಿಸುತ್ತಾರೆಂದು ಹೇಳಿದರು.ಶಾಸಕರ ಬಡಿದಾಟ ಪ್ರಕರಣದಲ್ಲಿ ಸರ್ಕಾರ ಕಾನೂನು ಕ್ರಮ ಕೈಗೊಳ್ಳಲಿದ್ದು, ಈ ವಿಚಾರದಲ್ಲಿ ಯಾವುದೇ ಮುಲಾಜೂ ಇಲ್ಲ. ಬಳ್ಳಾರಿ ಜಿಲ್ಲೆಯ ಶಾಸಕ ಆನಂದ್‍ಸಿಂಗ್ ಮೇಲೆ ಹಲ್ಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಂಪ್ಲಿ ಶಾಸಕ ಗಣೇಶ್ ಬಂಧನವಾಗಿದ್ದು, ಯಾವುದೇ ಮಲಾಜೂ ಇಲ್ಲದೇ ತಪ್ಪಿತಸ್ಥರ ವಿರುದ್ಧ ಸರ್ಕಾರ ಕಾನೂನು ಕ್ರಮ ಕೈಗೊಳ್ಳುವುದು ನಿಶ್ಚಿತ ಎಂದು ಹೇಳಿದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link