ಕಾದು ನೋಡುವ ತಂತ್ರಕ್ಕೆ ಮೊರೆಹೋದ ಬಿಜೆಪಿ

ಬೆಂಗಳೂರು

         ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ವಲಯಲ್ಲಿ ಸಚಿವ ಸಂಪುಟ ವಿಸ್ತರಣೆಯ ನಂತರ ಅಸಮಾಧಾನ, ಅತೃಪ್ತಿ ಹೊಗೆಯಾಡುತ್ತಿದ್ದರೆ, ಕೇಸರಿ ಪಾಳಯ ಮುಂದಿನ ಬೆಳವಣಿಗೆಯನ್ನು ಕಾದು ನೋಡುವ ತೀರ್ಮಾನಕ್ಕೆ ಬಂದಿದೆ.

          ಬೆಂಗಳೂರಿನಲ್ಲಿಂದು ಸುದ್ದಿಗಾರರ ಜತೆ ಮಾತನಾಡಿದ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಬಿ.ಎಸ್. ಯಡಿಯೂರಪ್ಪ ಅವರು, ನಾವು ಅವಸರದ ಕ್ರಮಕ್ಕೆ ಮುಂದಾಗುವುದಿಲ್ಲ, ಪರಿಸ್ಥಿತಿಯನ್ನು ಕಾದು ನೋಡುತ್ತಿರುವುದಾಗಿ ಹೇಳಿದ್ದಾರೆ.

        ನಾವು 104 ಶಾಸಕರಿದ್ದೇವೆ. ರಾಜ್ಯದಲ್ಲಿ ಬರಗಾಲ ತೀವ್ರವಾಗಿದೆ. ರೈತರ ನೋವಿಗೆ ಸ್ಪಂದಿಸುವ ಕೆಲಸವನ್ನು ನಾವು ಮಾಡುತ್ತಿದ್ದೇವೆ ಅದರೆ ಕೆಲವು ವ್ಯಕ್ತಿಗಳು ಮತ್ತು ಶಾಸಕರ ಮನಸ್ಸಿನಲ್ಲಿ ಏನಿದೆ ಎಂಬುದು ತಮಗೆ ಗೊತ್ತಿಲ್ಲ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

         ಸೂಕ್ತ ಕಾಲದಲ್ಲಿ ಸೂಕ್ತ ನಿರ್ಣಯ ಮಾಡುತ್ತೇವೆ ಎಂದು ಹೇಳುವ ಮೂಲಕ ಮುಂದಿನ ಬೆಳವಣಿಗೆ ಕೂತುಹಲಕಾರಿಯಾಗಿರಲಿದೆ ಎಂಬ ಸುಳಿವು ನೀಡಿದರು.

         ಎಚ್. ಡಿ. ಕುಮಾರಸ್ವಾಮಿ ನೇತ್ವತ್ವದ ಸರ್ಕಾರದಲ್ಲಿ ಎಲ್ಲವೂ ನೆಟ್ಟಗಿಲ್ಲ. ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್ ಪಕ್ಷದಲ್ಲಿ ಅಸಮಾಧಾನ ಸ್ಫೋಟವಾಗಲಿದೆ ಎಂದು ಬಹಳ ಹಿಂದೆಯೇ ಹೇಳಿದ್ದೆ. ಅದರಂತೆ ಸಚಿವ ಸ್ಥಾನದಿಂದ ವಂಚಿತರಾದ ರಾಮಲಿಂಗಾ ರೆಡ್ಡಿ , ರಮೇಶ್ ಜಾರಕಿಹೊಳಿ ಮೊದಲಾದವರು ಅಸಮಾಧಾನವನ್ನು ಬಹಿರಂಗವಾಗಿ ಹೊರಹಾಕಿದ್ದಾರೆ. ಮುಂದಿನ ದಿನಗಳಲ್ಲಿ ಇದು ಮತ್ತಷ್ಟು ವಿಕೋಪಕ್ಕೆ ತಿರುಗಲೂಬಹುದು ಎಂದು ಹೇಳಿದರು.

         ಆದರೆ ನಾವಾಗಿಯೇ ಮೈತ್ರಿ ಸರ್ಕಾರವನ್ನು ಉರುಳಿಸಲು ಹೋಗುವುದಿಲ್ಲ. ನಾನು ಈವರೆಗೆ ಯಾವುದೇ ನಾಯಕರನ್ನು ಭೇಟಿ ಮಾಡಿಲ್ಲ ಆದರೆ ಯಾರು ಯಾರಾನ್ನಾದರೂ ಭೇಟಿಯಾಗಬಹುದಲ್ಲ ಎಂದು ತಿರುಗೇಟು ನೀಡಿದರು. ಪಕ್ಷದ ತತ್ವ, ಸಿದ್ದಾಂತಗಳಿಗೆ ಒಪ್ಪಿ ಸ್ವಇಚ್ಚೆಯಿಂದ ಯಾರೇ ಬಂದರೂ ಸ್ವಾಗತ ಮಾಡುತ್ತೇವೆ ಎಂದು ಯಡಿಯೂರಪ್ಪ ಹೇಳಿದರು.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap