ಕಲಬುರಗಿ
ಕಲಬುರಗಿಯ ಬಿಜೆಪಿ ಶಾಸಕ ಬಸವರಾಜ್ ಮತ್ತಿಮೂಡ ಅವರ ಪತ್ನಿ ಜಯಶ್ರೀ ವಿವಾದ ಸೃಷ್ಟಿಸಿದ್ದಾರೆ. ಕಾರ್ಯಕ್ರಮ ವೊಂದರಲ್ಲಿ ಅವರು ‘ಜೈ ಮಹಾರಾಷ್ಟ್ರ’ ಎಂದು ಘೋಷಣೆ ಕೂಗುವ ಮೂಲಕ ಹೊಸ ವಿವಾದ ಸೃಷ್ಠಿಸಿದ್ದಾರೆ.ಶಹಬಾದ್‌ನಲ್ಲಿ ಜಯಶ್ರೀ ಅವರು ತಮ್ಮ ಭಾಷಣದ ಕೊನೆಯಲ್ಲಿ ‘ಜೈ ಮಹಾರಾಷ್ಟ್ರ’ ಎಂದು ಘೋಷಣೆ ಕೂಗಿದ್ದಾರೆ. ಕನ್ನಡಿಗರಾಗಿ ಹಾಗೂ ಚುನಾಯಿತ ಜನಪ್ರತಿನಿಧಿಯ ಪತ್ನಿಯಾಗಿ ಮಹಾರಾಷ್ಟ್ರ ಪರ ಘೋಷಣೆ ಕೂಗಿರುವುದಕ್ಕೆ ತೀವ್ರ ಖಂಡನೆ ವ್ಯಕ್ತವಾಗಿದೆ.
ಶಹಬಾದ್ ನಗರದ ಭಾರತ್ ಚೌಕ್‌ನಲ್ಲಿ ಬುಧವಾರ ಸಂಜೆ ಮರಾಠ ಯುವಕ ಮಂಡಳಿಯಿಂದ ಛತ್ರಪತಿ ಶಿವಾಜಿ ಮಹಾರಾಜ ಜಯಂತ್ಯುತ್ಸವ ಆಯೋಜಿಸಲಾಗಿತ್ತು. ಇದರಲ್ಲಿ ಶಾಸಕ ಬಸವರಾಜ್ ಮತ್ತಿಮೂಡ ಮತ್ತು ಅವರ ಪತ್ನಿ ಜಯಶ್ರೀ ಭಾಗವಹಿಸಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
