ಬೆಳಗಾವಿ
ಗುಜರಾತ್‍ನ ಅಹ್ಮದಾಬಾದ್‍ನಲ್ಲಿ ಡಿಸೆಂಬರ್ 21ರಿಂದ ಮೂರು ದಿನಗಳ ಕಾಲ ನಡೆಯುವ ಬಿಜೆಪಿ ಮಹಿಳಾ ಮೋರ್ಚಾ ರಾಷ್ಟ್ರೀಯ ಸಮಾವೇಶದಲ್ಲಿ ಕರ್ನಾಟಕದ 600ಕ್ಕೂ ಅಧಿಕ ಕಾರ್ಯಕರ್ತರು ಭಾಗವಹಿಸಲಿದ್ದಾರೆ.
10 ವರ್ಷಗಳ ನಂತರ ನಡೆಯುತ್ತಿರುವ ಈ ಸಮಾವೇಶದಲ್ಲಿ 6000ಕ್ಕೂ ಅಧಿಕ ಪ್ರತಿನಿಧಿಗಳು ಭಾಗವಹಿಸುವ ನಿರೀಕ್ಷೆ ಇದೆ ಎಂದು ರಾಜ್ಯದ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಭಾರತಿ ಶೆಟ್ಟಿ ಇಂದಿಲ್ಲಿ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಮಹಿಳಾ ಮೋರ್ಚಾದ ಪದಾಧಿಕಾರಿಗಳು, ಜಿಲ್ಲಾಪರಿಷತ್, ತಾಲೂಕು ಪಂಚಾಯತ್ ಸದಸ್ಯರು, ಶಾಸಕರು ಮತ್ತು ಇತರರು ರಾಜ್ಯದ ನಿಯೋಗದಲ್ಲಿ ಇರಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ಮತ್ತು ಇತರ ಪಕ್ಷಗಳು ನಡೆಸುತ್ತಿರುವ ನಕಾರಾತ್ಮಕ ಅಭಿಯಾನದ ವಿರುದ್ಧವಾಗಿ ಹಾಗೂ 2019ರ ಲೋಕಸಭಾ ಚುನಾವಣೆಯಲ್ಲಿ ಪಕ್ಷವನ್ನು ಮತ್ತೊಮ್ಮೆ ಅಧಿಕಾರಕ್ಕೆ ತರುವ ಉದ್ದೇಶದಿಂದ ಈ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಅವರು ಮಾಹಿತಿ ನೀಡಿದರು.
ರಕ್ಷಣಾ ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಸಮಾವೇಶ ಉದ್ಘಾಟಿಸಲಿದ್ದು, ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ಸೇರಿದಂತೆ ಕೇಂದ್ರ ಮತ್ತು ರಾಜ್ಯ ಸಚಿವರು ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದರು.
ಡಿಸೆಂಬರ್ 22ರಂದು ಮಹಿಳಾ ಮೋರ್ಚಾ ಸದಸ್ಯರನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಲಿದ್ದಾರೆ ಎಂದು ಭಾರತಿ ಶೆಟ್ಟಿ ತಿಳಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ