ದೇವನಹಳ್ಳಿ:
ಬಿಜೆಪಿಯ ವಿಧಾನ ಪರಿಷತ್ ಸದಸ್ಯೆ ತೇಜಸ್ವಿನಿ ಗೌಡ ದೊಡ್ಡರಾಯಪ್ಪನಹಳ್ಳಿ ಗ್ರಾಮಸ್ಥರ ಮೇಲೆ ಹಲ್ಲೆ ಮಾಡಿರುವ ಘಟನೆ ವರದಿಯಾಗಿದೆ.
ಶಾಲಾ ಕಟ್ಟಡ ಕಾಮಗಾರಿ ವಿಚಾರವಾಗಿ ಗ್ರಾಮಸ್ಥರ ಮೇಲೆ ದೌರ್ಜನ್ಯ ನಡೆದಿದ್ದು, ತೇಜಸ್ವಿನಿ ಗೌಡ ಅವರು ಗ್ರಾ ಪಂ ಅಧ್ಯಕ್ಷ ಅವಾಚ್ಯ ಶಬ್ದಗಳಿಂದ ನಿಂದಿಸಿ ಗ್ರಾಮ ಪಂಚಾಯಿತಿ ಅಧ್ಯಕ್ಷ, ಗ್ರಾಮಸ್ಥರ ಮೇಲೆ ಹಲ್ಲೆ ನಡೆಸಿದ್ದಾರೆ. ಈ ದೃಶ್ಯ ಮೊಬೈಲ್ನಲ್ಲಿ ಸೆರೆ ಹಿಡಿಯಲಾಗಿದೆ.
ಸರ್ಕಾರದಿಂದ ಅನುಮೋದನೆ ಸಿಗದಿದ್ರೂ ಶಾಲೆ ಕಟ್ಟಡ ನಿರ್ಮಾಣಕ್ಕೆ ತೇಜಸ್ವಿನಿ ಗೌಡ ಮುಂದಾಗಿದ್ದಾರೆ. ಗ್ರಾಮ ಪಂಚಾಯಿತಿ ಅಧ್ಯಕ್ಷನ ಮನೆಗೆ ದಾರಿ ಬಿಡದೆ ಕಾಮಗಾರಿ ನಡೆಸಲು ಸಿದ್ದತೆ ಮಾಡಿಕೊಂಡಿದ್ದಾರೆ. ಈ ವಿಚಾರವಾಗಿ ಕೇಳಲು ಹೋದ ಗ್ರಾಮಸ್ಥರ ಮೇಲೆ ತೇಜಸ್ವಿನಿ ಗೌಡ ದರ್ಪ ತೋರಿಸಿದ್ದಾರೆ. ನಿಂದಿಸಿ ಹಲ್ಲೆ ನಡೆಸಿದ್ದಾರೆ. ದೊಡ್ಡರಾಯಪ್ಪನಹಳ್ಳಿ ಗ್ರಾಮಸ್ಥರು MLC ತೇಜಸ್ವಿನಿ ಗೌಡ ವಿರುದ್ಧ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








