ಚಿತ್ರದುರ್ಗ
ಸ್ಥಳೀಯ ಬಿಜೆಪಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಅವರ ನಿವಾಸದ ಬಳಿ ಇಂದು ( ಶನಿವಾರ) ಬೆಳಿಗ್ಗೆ 9 ಗಂಟೆಗೆ ನನ್ನ ಪರಿವಾರ ಬಿಜೆಪಿ ಪರಿವಾರ ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ಅಭಿಯಾನದ ಅಂಗವಾಗಿ ಶಾಸಕರ ನಿವಾದ ಮೇಲೆ ಬಿ.ಜೆ.ಪಿ ಪಕ್ಷದ ಧ್ವಜಾರೋಹಣ ನೆರವೇರಿಸಲಾಗುವುದು ಎಂದು ಬಿಜೆಪಿ ಪ್ರಕಟಣೆ ತಿಳಿಸಿದೆ.
ಜಿಲ್ಲಾ ಬಿಜೆಪಿ ಅಧ್ಯಕ್ಷ ಕೆ.ಎಸ್.ನವೀನ್, ಮಾಜಿ ಅಧ್ಯಕ್ಷ ಹಾಗೂ ಲೋಕಸಭಾ ಚುನಾವಣಾ ಸಂಘಟಕ ಜಿ.ಟಿ.ನರೇಂದ್ರನಾಥ್, ಗ್ರಾಮಾಂತರ ಬಿಜೆಪಿ ಅಧ್ಯಕ್ಷ ಸುರೇಶ್ ಸಿದ್ದಾಪುರ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ್, ಮುಖಂಡರಾದ ದಗ್ಗೆ ಶಿವಪ್ರಕಾಶ್, ಜಿ.ಎಂ.ಸುರೇಶ್, ಸಂಪತ್‍ಕುಮಾರ್ ಸೇರಿದಂತೆ ಹಲವು ಮುಖಂಡರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ