ಜಿಲ್ಲಾ ಕೇಂದ್ರಗಳಲ್ಲಿ ಬಿಜೆಪಿ ಪ್ರತಿಭಟನೆ

ಬೆಂಗಳೂರು

          ಜಿಲ್ಲಾ ಕೇಂದ್ರಗಳಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರ ಟಿಪ್ಪು ಜಯಂತಿ ಆಚರಿಸದಂತೆ ಒತ್ತಾಯಿಸಿದರು. ದಾವಣಗೆರೆ ನಗರದ ಜಯದೇವ ವೃತ್ತದಿಂದ ಮೆರವಣಿಗೆಯಲ್ಲಿ ಸಾಗಿದ ಪ್ರತಿಭಟನಾಕಾರರು ಪಿಬಿ ರಸ್ತೆಯಲ್ಲಿ ಕೆಲ ಕಾಲ ರಸ್ತೆ ಬಂದ್ ಮಾಡಿ ವಾಹನಗಳ ಸಂಚಾರಕ್ಕೆ ಅಡ್ಡಿಪಡಿಸಿದರು. ಶಾಸಕ ಎಸ್.ಎ.ರವೀಂದ್ರನಾಥ್ ಸೇರಿದಂತೆ ನೂರಾರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

          ನಂತರ ಉಪವಿಭಾಗಾಧಿಕಾರಿಗಳ ಕಚೇರಿಗೆ ತೆರಳಿ ಮನವಿ ಸಲ್ಲಿಸಲಾಯಿತು. ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಸಂಸದ ನಳಿನ್ ಕುಮಾರ್ ಕಟೀಲ್, ಟಿಪ್ಪು ಜಯಂತಿ ಮುಂದುವರಿಸಿರುವುದು ಖಂಡನೀಯ ಎಂದು ಹೇಳಿದರು. ರಾಯಚೂರಿನ ಜಿಲ್ಲಾಧಿಕಾರಿ ಕಚೇರಿ ಎದುರು ಟಿಪ್ಪು ಜಯಂತಿ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.

        ಮಡಿಕೇರಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾಜಿ ಸಭಾಪತಿ ಕೆ.ಜೆ.ಬೋಪಯ್ಯ ಪಾಲ್ಗೊಂಡಿದ್ದರು. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರದಲ್ಲಿ ಬಿಜೆಪಿ ಕಾರ್ಯಕಕರ್ತರು ಪ್ರತಿಭಟನೆ ನಡೆಸಿ ಟಿಪ್ಪು ಜಯಂತಿ ಕೈಬಿಡುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಮೈಸೂರಿನ ಗಾಂಧಿ ವೃತ್ತದಲ್ಲಿ ನಡೆದ ಪ್ರತಿಭಟನೆಯಲ್ಲಿ ಬಿಜೆಪಿ ರಾಜ್ಯ ವಕ್ತಾರ ಗೋ. ಮಧುಸೂದನ್, ಮಾಜಿ ಮೇಯರ್ ಸಂದೇಶ್ ಸ್ವಾಮಿ ಸೇರಿದಂತೆ ಹಲವಾರು ಮಂದಿ ಪಾಲ್ಗೊಂಡಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ 

 

Recent Articles

spot_img

Related Stories

Share via
Copy link
Powered by Social Snap