ಹರಿಹರ:
ನಗರದಲ್ಲಿ ಇಂದು ಸಂಜೆ ನಾಲ್ಕು ಗಂಟೆಗೆ ಚುನಾವಣೆಯ ಪ್ರಚಾರ ಕುರಿತು ಚಲನಚಿತ್ರ ನಟಿ ಶೃತಿ ಸೇರಿದಂತೆ ಬಿಜೆಪಿ ಮುಖಂಡರು ರೋಡ್ ಶೋ ಕಾರ್ಯಕ್ರಮದಲ್ಲಿ ಭಾಗಿಯಾಗಲ್ಲಿದ್ದು, ತಾಲೂಕಿನ ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಬೇಕೆಂದು ನಗರ ಘಟಕ ಅಧ್ಯಕ್ಷ ರಾಜು ರೋಖಡೆ ಮನವಿ ಮಾಡಿದರು.
ನಗರದ ರಚನಾ ಕ್ರೀಡಾ ಟ್ರಸ್ಟ್ ನಲ್ಲಿ ಬಿಜೆಪಿ ಪಕ್ಷದ ಮುಖಂಡರು ನೆಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂದು ಸಂಜೆ ನಾಲ್ಕು ಗಂಟೆಗೆ ನೀರಾವರಿ ಇಲಾಖೆಯಿಂದ ಪ್ರಾರಂಭವಾಗುವ ಮೆರವಣಿಗೆಯಲ್ಲಿ ಬಿಜೆಪಿ ಅಭ್ಯರ್ಥಿ ಜಿ.ಎಂ ಸಿದ್ದೇಶ್ವರ್, ಚಲನಚಿತ್ರ ನಟಿ ಶೃತಿ, ಜೆ.ಸಿ ಮಾದುಸ್ವಾಮಿ, ಮುರುಗೇಶ್ ನಿರಾಣಿ, ಯಶವಂತ್ ಜಾದವ್, ಬಿಪಿ ಹರೀಶ್, ಹಾಗೂ ಜಿಲ್ಲೆಯ ಎಲ್ಲಾ ತಾಲೂಕಿನ ಶಾಸಕರು, ಮಾಜಿ ಶಾಸಕರು ಮತ್ತು ಇನ್ನೂ ಅನೇಕ ಬಿಜೆಪಿ ಮುಖಂಡರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎಂದರು.
ಗೋಷ್ಠಿಯಲ್ಲಿ ಬಿಜೆಪಿ ಮುಖಂಡರಾದ ಡಿ. ಹೇಮಂತರಾಜ್, ಎಚ್. ಶಿವಾನಂದಪ್ಪ, ಬೆಳ್ಳೂಡಿ ರಾಮಚಂದ್ರಪ್ಪ, ಬಾತಿ ಚಂದ್ರಶೇಖರ್, ಆನಂದ್, ಕೀರ್ತಿ ಕುಮಾರ್, ಅಜಿತ್ ಸಾವಂತ್, ತುಳಜಪ್ಪ ಭೂತೆ, ಮಂಜಾನಾಯ್ಕ್ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.