ಜಗಳೂರು:
ದಾವಣಗೆರೆ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿ ಜಿ.ಎಂ.ಸಿದ್ದೇಶ್ವರರವರನ್ನು ಬಹುಮತದಿಂದ ಆಯ್ಕೆಮಾಡುವ ಮೂಲಕ ಮತ್ತೊಮ್ಮೆ ನರೇಂದ್ರ ಮೋದಿ ಪ್ರಧಾನ ಮಂತ್ರಿಯಾಗಿ ದೇಶದ ಅಭಿವೃದ್ಧಿಗೆ ಮುನ್ನುಡಿ ಬರೆಯಬೇಕೆಂದು ಎಂದು ಶಾಸಕ ಎಸ್.ವಿ.ರಾಮಚಂದ್ರ ಹೇಳಿದರು.ತಾಲೂಕಿನ ಮಾದಮುತ್ತೇನಹಳ್ಳಿ ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.
ಕ್ಷೇತ್ರಕ್ಕೆ ಸೂಕ್ತವಾದ ಅಭ್ಯರ್ಥಿಯೆಂದು ಹಾಲಿ ಸಂಸದರಾದ ಜಿ.ಎಂ.ಸಿದ್ದೇಶ್ವರ್ ಅವರನ್ನೆ ಭಾರತೀಯ ಜನತಾ ಪಾರ್ಟಿ ಆಯ್ಕೆ ಮಾಡಿದೆ. ಗ್ರಾಮೀಣಭಾಗದ ಬಿಜೆಪಿ ಪಕ್ಷದ ವಿವಿಧ ಮೋರ್ಚಾದ ಪದಾಧಿಕಾರಿಗಳು ಹಗಲಿರುಳು ಬಿಜೆಪಿ ಗೆಲುವಿಗಾಗಿ ಹಾಗೂ ದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ತರಲು ಎಲ್ಲ ಕಾರ್ಯಕರ್ತರು ಒಗ್ಗೂಡಿ ಕೇಂದ್ರದ ಜನ ಸಾಮಾನ್ಯರಿಗೆ ನೀಡಿದ ಅಭಿವೃದ್ಧಿ ಕಾರ್ಯಕ್ರಮಗಳು, ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಕ್ಷೇತ್ರಕ್ಕೆ ನೀಡಿರುವ ನೀಡಿರುವ ಅನುಧಾನಗಳು, ನಾನು ಶಾಸಕರಾಗಿದ್ದಾಗ ಕ್ಷೇತ್ರದಲ್ಲಿ ಅನೇಕ ಅಬಿವೃದ್ಧಿ ಕಾರ್ಯಗಳು ಜನರಿಗೆ ಮನ ಮುಟ್ಟುವಂತೆ ಮಾಡಬೇಕೆಂದು ಎಂದು ಕಾರ್ಯಕರ್ತರಿಗೆ ಕರೇ ನೀಡಿದರು.ಈ ಸಂದರ್ಭದಲ್ಲಿ ಬಿಜೆಪಿ ಪಕ್ಷದ ತಾಲೂಕು ಅಧ್ಯಕ್ಷ ಡಿವಿ ನಾಗಪ್ಪ ಮಾಜಿ.ತಾ.ಪಂ ಅಧ್ಯಕ್ಷ ಶ್ರೀನಿವಾಸ್ ಬಿಜೆಪಿ ಎಸ್‍ಟಿ ಮೋರ್ಚಾ ತಾಲೂಕು ಅಧ್ಯಕ್ಷ ನಿಜಲಿಂಗಪ್ಪ ಮಾದಮುತ್ತೇನಹಳ್ಳಿ ಮುಖಂಡ ಪಾಟೇಲ್ ಮುಂತಾದವರು ಉಪಸ್ಥಿತರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
