ಜಗಳೂರು:
ತಾಲೂಕಿನ ಕೆಳಗೋಟೆ ಗ್ರಾಮದಲ್ಲಿ ಶಾಸಕ ಎಸ್.ವಿ ರಾಮಚಂದ್ರ ಬಿಜೆಪಿ ಅಭ್ಯರ್ಥಿ ಜಿ.ಎಂ ಸಿದ್ದೇಶ್ವರ್ ಪರ ಮತಯಾಚಿಸಿದರು.
ಗ್ರಾಮದ ಜನರನ್ನುದ್ದೇಶಿಸಿ ಮಾತನಾಡಿದ ಅವರು ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಗ್ರಾಮಸ್ಥರು ಹೆಚ್ಚು ಮತ ನೀಡಿ ಗೆಲುವಿಗೆ ಸಹಕರಿಸಿದಂತೆ ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗೆ ಮತ ನೀಡಬೇಕು ಎಂದು ಮನವಿ ಮಾಡಿದರು.
ಕ್ಷೇತ್ರದಲ್ಲಿ ಮಾಡಿದ ಅಭಿವೃದ್ದಿ ಕೆಲಸಗಳು ಕಣ್ಣಿಗೆ ಕಾಣುತ್ತಿವೆ. ಚುನಾವಣೆ ಮುಗಿದ ಕೂಡಲೇ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದ್ದು ಮೈತ್ರಿ ಮುರಿದು ಬೀಳಲಿದೆ. ದೇಶದಲ್ಲಿ ಮೋದಿ ಪ್ರಧಾನಿಯಾಗಲಿದ್ದಾರೆ ನಮ್ಮನ್ನು ಬೆಂಬಲಿಸಿ ಎಂದರು. ಈ ಸಂದರ್ಭದಲ್ಲಿ ಬಿಜೆಪಿ ತಾಲೂಕಾಧ್ಯಕ್ಷ ಡಿ.ವಿ ನಾಗಪ್ಪ, ಮಾಹಿ ಎಪಿಎಂಸಿ ಅಧ್ಯಕ್ಷ ಮಹೇಶ್, ತಾ.ಪಂ ಮಾಜಿ ಅಧ್ಯಕ್ಷ ಶ್ರೀನಿವಾಸ್, ಮುಖಂಡರಾದ ಲೋಕೇಶಣ್ಣ, ನಾಗರಾಜ್, ಹನುಮಂತಪ್ಪ, ಜಗದೀಶ್, ಮಲ್ಲಣ್ಣ ಸೇರಿದಂತೆ ಮತ್ತಿತರಿದ್ದರು.