ಹಿರಿಯೂರು:
ಐದು ವರ್ಷ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಭ್ರಷ್ಟಾಚಾರ ರಹಿತ ಮತ್ತು ಜನಪರ ಆಡಳಿತ ನೀಡಿದ್ದು, ದೇಶದ ಜನರ ಪ್ರೀತಿ, ವಿಶ್ವಾಸ ಗಳಿಸಿ ಮತ್ತೊಮ್ಮೆ ಭಾರಿ ಬಹಮತದೊಂದಿಗೆ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದು ಬಿಜೆಪಿ ಒಬಿಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ಡಿ.ಟಿ.ಶ್ರೀನಿವಾಸ್ ಹೇಳದರು.
ತಾಲೂಕಿನ ಹರಿಯಬ್ಬೆ, ಧರ್ಮಪುರ, ಪಿ.ಡಿ.ಕೋಟೆ, ಖಂಡೇನಹಳ್ಳಿ, ಕಣಜನಹಳ್ಳಿ ಗ್ರಾಪಂ. ವ್ಯಾಪ್ತಿಯಲ್ಲಿ ಮನೆ ಮನೆಗೆ ತೆರಳಿ ಬಿಜೆಪಿ ಅಭ್ಯರ್ಥಿ ಪರ ಅವರು ಮತಯಾಚಿಸಿ ಮಾತನಾಡಿದರು.
ನರೇಂದ್ರ ಮೋದಿ ಅವರ ಸಮರ್ಥ ನಾಯಕತ್ವ ದೇಶದ ಅಭಿವೃದ್ಧಿಯ ದಿಕ್ಕನ್ನು ಬದಲಾಯಿಸಿದೆ, ವಿಶ್ವದಲ್ಲಿ ಭಾರತ ಪ್ರತಿಷ್ಠಿತ ರಾಷ್ಟ್ರವಾಗಿ ಬದಲಾಗಿದೆ. ಮೋದಿ ಅವರ ನವ ಭಾರತ ನಿರ್ಮಾಣದ ಕನಸಿಗೆ ಬಲ ತುಂಬಲು ಬಿಜೆಪಿ ಬೆಂಬಲಿಸುವಂತೆ ಅವರು ಮನವಿ ಮಾಡಿದರು.
ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಆರ್.ಕಾಂತರಾಜ್ ಮಾತನಾಡಿ ದೇಶದ ಜನತೆ ಮೋದಿ ಅವರ ಜನಪರ ಆಡಳಿತಕ್ಕೆ ಮನ್ನಣೆ ನೀಡಿದ್ದು, ಮತ್ತೊಮ್ಮೆ ಮೋದಿ ಅವರನ್ನು ಪ್ರಧಾನಮಂತ್ರಿಯನ್ನಾಗಿ ಮಾಡಲು ತುಂದಿಗಾಲಿನಲ್ಲಿ ನಿಂತಿದ್ದಾರೆ ಎಂದರು.
ಈ ಕಾರ್ಯಕ್ರಮದಲ್ಲಿ ಬಿಜೆಪಿ ಮುಖಂಡರಾದ ಕಬಡ್ಡಿ ಶ್ರೀನಿವಾಸ್, ದಯಾನಂದ್, ಗಿರೀಶ್, ನಾಗರಾಜ್‍ರಾವ್, ಮುರುಳಿ, ಈರಣ್ಣ, ನಾಗರಾಜ್,ತಿಪ್ಪೇಸ್ವಾಮಿ, ಗ್ರಾಪಂ.ಅಧ್ಯಕ್ಷೆ ಸುನೀತಾ ಮಂಜುನಾಥ್, ಚಂದ್ರಪ್ಪ, ತಾಡಪ್ಪ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.