ಹುಬ್ಬಳ್ಳಿ
ಚಿಂಚೋಳಿ ಹಾಗೂ ಕುಂದಗೋಳ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹುಬ್ಬಳ್ಳಿಯಲ್ಲಿ ಹೇಳಿದ್ದಾರೆ.
ರಾಜ್ಯ ಸಮ್ಮಿಶ್ರ ಸರ್ಕಾರದ ಬಗ್ಗೆ ಕಾಂಗ್ರೆಸ್‍ನ 20 ಶಾಸಕರು ಅತೃಪ್ತಿ ಹೊಂದಿದ್ದಾರೆ. ಅವರು ಯಾವುದೇ ಸಮಯದಲ್ಲಿ ಯಾವ ನಿರ್ಧಾರವನ್ನು ಬೇಕಾದರೂ ತೆಗೆದುಕೊಳ್ಳಬಹುದು. ಈ ನಿರ್ಧಾರದ ಬಗ್ಗೆ ಕಾದು ನೋಡೋಣ ಎಂದು ಹೇಳಿದರು.
ಬಿಜೆಪಿ ಪ್ರಸ್ತುತ 104 ಶಾಸಕರನ್ನು ಹೊಂದಿದ್ದು, ಕುಂದಗೋಳ ಮತ್ತು ಚಿಂಚೋಳಿಯಲ್ಲಿ ಗೆದ್ದ ಬಳಿಕ ನಮ್ಮ ಸಂಖ್ಯೆ 106ಕ್ಕೇ ಏರಿಕೆಯಾಗಲಿದೆ. ಪಕ್ಷೇತರರು ಕೂಡ ನಮಗೆ ಬೆಂಬಲ ನೀಡಲಿದ್ದಾರೆ ಎಂದು ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.