ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರ ಬಂಧನ

ಬೆಂಗಳೂರು

          ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ, ಪ್ರಧಾನಿ ಮೋದಿ ಸರ್ಕಾರ ರಫೇಲ್ ಯುದ್ದ ವಿಮಾನ ಖರೀದಿಯಲ್ಲಿ ಹಗರಣ ನಡೆಸಿದೆ ಎಂಬ ಸುಳ್ಳು ಆರೋಪ ಮಾಡಿರುವುದನ್ನು ಖಂಡಿಸಿ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಮುಖಂಡರು, ಕಾರ್ಯಕರ್ತರನ್ನು ಪೊಲೀಸರು ಬಂಧಿಸಿ ಸಂಜೆ ಬಿಡುಗಡೆ ಮಾಡಿದರು.

          ನಗರದ ಮೌರ್ಯ ವೃತ್ತದ ಗಾಂಧಿ ಪ್ರತಿಮೆ ಮುಂಭಾಗ ಬುಧವಾರ ಬೆಳಿಗ್ಗೆ ಸೇರಿದಬಿಜೆಪಿ ಮುಖಂಡರು ಕಾರ್ಯಕರ್ತರು ಪ್ರತಿಭಟನೆ ನಡೆಸಿ ರಫೇಲ್ ಡೀಲ್ ಯುದ್ಧ ವಿಮಾನ ಖರೀದಿ ಪ್ರಕರಣದಲ್ಲಿ ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಕ್ಲೀನ್‍ಚಿಟ್.ಆದರೂ, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ಸುಳ್ಳು ಆರೋಪ ಹೊರೆಸಿದ್ದಾರೆ ಎಂದು ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

           ರಫೇಲ್ ಡೀಲ್ ವಿಮಾನ ಖರೀದಿ ಯಾವುದೇ ವಾಣಿಜ್ಯೋದ್ಯಮದ ಒಲವು ಹೊಂದಿದಂತೆ ಕಾಣುತ್ತಿಲ್ಲ ಎಂದು ಸುಪ್ರೀಂಕೋರ್ಟ್? ಹೇಳುವ ಮೂಲಕ ಪ್ರತಿಪಕ್ಷಗಳು ನಡೆಸುತ್ತಿದ್ದ ಅಭಿಯಾನವನ್ನು ಕೊನೆಗೊಳಿಸಿದೆ.ವೃಥಾ ಆರೋಪಗಳನ್ನು ಮಾಡುವ ಮೂಲಕ ಕಾಂಗ್ರೆಸ್? ಅಧ್ಯಕ್ಷ ರಾಹುಲ್? ಗಾಂಧಿಯವರು ಸೈನಿಕರ, ಜನರ ಮನಸಿನಲ್ಲಿ ಅನುಮಾನಗಳು ಹುಟ್ಟುವಂತೆ ಮಾಡಿದ್ದಾರೆ. ಅವರು ಕೂಡಲೇ ಕ್ಷಮೆ ಕೇಳಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ರಾಹುಲ್ ಗಾಂಧಿ ಈ ಕೂಡಲೇ ಕ್ಷಮೆ ಕೋರಬೇಕೆಂದು ಆಗ್ರಹಿಸಿ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಹೊರಟರು .

        ಪ್ರತಿಭಟನೆಯಲ್ಲಿ ಮಾಜಿ ಶಾಸಕ ಮುನಿರಾಜು, ಬಿಜೆಪಿ ರಾಜ್ಯ ಕಾರ್ಯದರ್ಶಿ ಎಂ.ಜಯದೇವ್, ರಾಜ್ಯ ಕೋಶಾಧ್ಯಕ್ಷ ಸುಬ್ಬಣ್ಣ, ನಗರ ಅಧ್ಯಕ್ಷ ಪಿ.ಎನ್.ಸದಾಶಿವ, ನಗರ ಜಿಲ್ಲೆ ಅಧ್ಯಕ್ಷ ಎಸ್.ಮುನಿರಾಜು, ಪಾಲಿಕೆ ಮಾಜಿ ಸದಸ್ಯ ರವೀಂದ್ರ ಸೇರಿದಂತೆ ಪ್ರಮುಖರಿದ್ದರು.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link