ಬೆಂಗಳೂರು
ಗೆಳತಿಯೊಂದಿಗೆ ಕಳೆದ ಖಾಸಗಿ ಕ್ಷಣಗಳ ಫೋಟೋ ಸೆರೆ ಹಿಡಿದು ಬ್ಲಾಕ್‍ಮೇಲ್ ಮಾಡುತ್ತಿದ್ದ ಹೇರ್ ಸಲೂನ್ ನೌಕರನೊಬ್ಬ ಸೈಬರ್ ಕ್ರೈಂ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದಾನೆ.
ಚಿಕ್ಕಬಾಣಸವಾಡಿ ಕಿರಣ್ (23) ಬಂಧಿತ ಆರೋಪಿಯಾಗಿದ್ದಾನೆ.ಕಳೆದ 2 ತಿಂಗಳಿನಿಂದ ಸಲುಗೆ ಬೆಳೆದಿದ್ದ ಗೆಳತಿಯೊಂದಿಗೆ ಕಳೆದ ಖಾಸಗಿ ಕ್ಷಣಗಳ ಭಾವಚಿತ್ರವನ್ನು ಆಕೆಯ ಸಂಬಂಧಿಗೆ ಕಳುಹಿಸಿ ಬ್ಲಾಕ್‍ಮೇಲ್ ಮಾಡುತ್ತಿದ್ದ ಪ್ರಕರಣ ದಾಖಲಿಸಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ.
ಆರೋಪಿಯು ಎರಡು ವರ್ಷಗಳಿಂದ ಬಾಣಸವಾಡಿಯ ಹೇರ್ ಸಲೂನ್ ಒಂದರಲ್ಲಿ ಜೊತೆಯಲ್ಲಿ ಕೆಲಸ ಮಾಡುತ್ತಿದ್ದ ಯುವತಿಯೊಬ್ಬರನ್ನು ಪರಿಚಯ ಮಾಡಿಕೊಂಡು ಸ್ನೇಹ ಬೆಳೆಸಿ ಎರಡು ತಿಂಗಳನಿಂದ ಆಕೆಯ ಜೊತೆ ಕಳೆದ ಖಾಸಗಿ ಕ್ಷಣಗಳನ್ನು ಮೊಬೈಲ್ ನಲ್ಲಿ ಫೋಟೋ ತೆಗೆದುಕೊಂಡಿದ್ದ.
ಇಬ್ಬರ ನಡುವೆ ಭಿನ್ನಾಭಿಪ್ರಾಯ ಉಂಟಾಗಿದ್ದರಿಂದ ಆಕ್ರೋಶ ಗೊಂಡಿದ್ದ ಆರೋಪಿಯು ಆಕೆಯೊಂದಿಗಿನ ಖಾಸಗಿ ಕ್ಷಣಗಳನ್ನು ಫೋಟೋಗಳನ್ನು ಸಂಬಂಧಿಗೆ ಕಳುಹಿಸಿ ಬ್ಲಾಕ್‍ಮೇಲ್ ಮಾಡುತ್ತಿದ್ದು ಈ ಸಂಬಂಧ ಯುವತಿಯು ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ್ದರು.
ಸಲುಗೆಯಿಂದಿರುವ ಜೊತೆಗಿನ ಖಾಸಗಿ ಕ್ಷಣಗಳ ಪೋಟೋ ತೆಗೆಯುವುದು ಅವುಗಳನ್ನು ಬಹಿರಂಗಪಡಿಸುವ ಕೃತ್ಯಗಳು ಹೆಚ್ಚಾಗುತ್ತಿದ್ದು ಇಂತಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಂಟಿ ಪೊಲೀಸ್ ಆಯುಕ್ತ ಸಂದೀಪ್‍ಪಾಟೀಲ್ ಎಚ್ಚರಿಕೆ ನೀಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








