ಬೆಂಗಳೂರು
ಕೊರೋನಾ ಸೋಂಕಿಗೆ ತುತ್ತಾಗಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ
ಅವಹೇಳನಕಾರಿ ಪೋಸ್ಟ್ ಹಾಕಿದ ಆರೋಪದಲ್ಲಿ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಕಾರ್ಯದರ್ಶಿ, ಕೆ.ಆರ್.ಪುರಂ ಬ್ಲಾಕ್
ಕಾಂಗ್ರೆಸ್ ಅಧ್ಯಕ್ಷ ಆನಂದ್ ಪ್ರಸಾದ್ ಎಂಬವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಆನಂದ್ ಅವರು ಅಮಿತ್ ಶಾ ವಿರುದ್ಧ ಅವಹೇಳನಕಾರಿಯಾಗಿ ಬರೆದಿದ್ದಾರೆ ಎಂದು ಆರೋಪಿಸಲಾಗಿತ್ತು. ತಕ್ಷಣ ಕಳೆದ ರಾತ್ರಿಯೇ
ಪೊಲೀಸರು ಅವರ ಮನೆಗೆ ಆಗಮಿಸಿ ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 153(ಎ) ಕಲಂನಡಿ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ