ಚಿತ್ರದುರ್ಗ:
ಭಾರತೀಯ ರೆಡ್‍ಕ್ರಾಸ್ ಸಂಸ್ಥೆ ಜಿಲ್ಲಾ ಶಾಖೆ, ಕರ್ನಾಟಕ ರಾಜ್ಯ ಸರ್ಕಾರಿ ಎನ್.ಪಿ.ಎಸ್.ನೌಕರರ ಸಂಘ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದೊಂದಿಗೆ ಐ.ಎಂ.ಎ.ಹಾಲ್‍ನಲ್ಲಿ ಬುಧವಾರ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು.
ಭಾರತೀಯ ರೆಡ್‍ಕ್ರಾಸ್ ಸಂಸ್ಥೆ ಜಿಲ್ಲಾ ಶಾಖೆಯ ಚೇರ್ಮನ್ ವೈ.ಬಿ.ಮಹೇಂದ್ರನಾಥ್ ಮಾತನಾಡಿ ರಕ್ತಕ್ಕೆ ಪರ್ಯಾಯವಾದ ವಸ್ತುವು ಬೇರೊಂದಿಲ್ಲ. ಅದಕ್ಕಾಗಿ ತುರ್ತು ಸಂದರ್ಭಗಳಲ್ಲಿ ಸಾವು-ಬದುಕಿನ ನಡುವೆ ಹೋರಾಟ ನಡೆಸುವವರಿಗೆ ರಕ್ತದಾನ ಮಾಡಿ ಅಮೂಲ್ಯವಾದ ಜೀವ ಉಳಿಸುವಂತೆ ಮನವಿ ಮಾಡಿದರು.
ಅಪಘಾತ, ಹೆರಿಗೆ, ಶಸ್ತ್ರಚಿಕಿತ್ಸೆಯಲ್ಲಿ ತುರ್ತಾಗಿ ರಕ್ತದ ಅವಶ್ಯಕತೆಯಿರುವುದರಿಂದ ಮುಂಜಾಗ್ರತೆಯಾಗಿ ರಕ್ತವನ್ನು ಸಂಗ್ರಹಿಸಿಕೊಂಡರೆ ಒಳ್ಳೆಯದು. ಹಾಗಾಗಿ ರಕ್ತದಾನಿಗಳು ಸ್ವಯಂಪ್ರೇರಿತರಾಗಿ ರಕ್ತದಾನಕ್ಕೆ ಮುಂದಾಗಿ. ರಕ್ತದಾನ ಮಾಡುವುದರಿಂದ ನಿಶ್ಯಕ್ತಿಯಾಗುತ್ತದೆ ಎನ್ನುವ ತಪ್ಪು ಕಲ್ಪನೆಯನ್ನು ಮನಸ್ಸಿನಿಂದ ತೆಗೆದು ಹಾಕಿ ಎಂದು ಹೇಳಿದರು.
ರಾಜ್ಯ ಶಾಖೆ ಸದಸ್ಯ ಎಸ್.ವೀರೇಶ್, ಕಾರ್ಯದರ್ಶಿ ಮಜಹರ್‍ವುಲ್ಲಾ, ಗಾಯತ್ರಿ ಶಿವರಾಂ, ಅರುಣ್‍ಕುಮಾರ್, ಡಾ.ಪ್ರಕಾಶ್, ಕರ್ನಾಟಕ ರಾಜ್ಯ ಸರ್ಕಾರಿ ಎನ್.ಪಿ.ಎಸ್.ನೌಕರರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿ.ಹನುಮಂತಪ್ಪ ರಕ್ತದಾನ ಶಿಬಿರದಲ್ಲಿ ಹಾಜರಿದ್ದರು.ಇಪ್ಪತ್ತೈದಕ್ಕೂ ಹೆಚ್ಚು ಮಂದಿ ರಕ್ತದಾನ ಮಾಡಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ