ಜಗಳೂರು :
ಎಲ್ಲಾ ದಾನಗಳಲ್ಲಿ ರಕ್ತದಾನ ಶ್ರೇಷ್ಠವಾದುದು ಎಂದು ಜಿಲ್ಲಾ ಪಂಚಾಯ್ತಿ ಪ್ರಭಾರಿ ಅಧ್ಯಕ್ಷೆ ಸವಿತಾಕಲ್ಲೇಶಪ್ಪ ಹೇಳಿದರು.
ಪಟ್ಟಣದ ವಾಲ್ಮಿಕಿ ಭವನದಲ್ಲಿ ಶಾಸಕ ಎಸ್‍ವಿ ರಾಮಚಂದ್ರ ಅವರ ಹುಟ್ಟು ಹಬ್ಬದ ಅಂಗವಾಗಿ ಎಸ್.ವಿ.ರಾಮಚಂದ್ರ ಹಾಗೂ ಸಂಸದ ಜಿಎಂ ಸಿದ್ದೇಶ್ವರ ಅಭಿಮಾನಿ ಬಳಗ ಹಾಗೂ ಜಿಲ್ಲಾ ಚಿಗಟೇರಿ ಆಸ್ಪತ್ರೆಯ ಸಹಯೋಗದಲ್ಲಿ ಏರ್ಪಡಿಸಲಾಗಿದ್ದ ಸ್ವಯಂಪ್ರೇರಿತ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.
ಸಾವು ಬದುಕಿನ ಮಧ್ಯೆ ಹೋರಾಟ ನಡೆಸಿದವರನ್ನು ಬದುಕಿಸಲು ರಕ್ತದಾನ ಮಾಡುವುದು ಸಮಾಜಮುಖಿ ಕಾರ್ಯದಲ್ಲಿ ಒಂದಾಗಿದೆ. ರಕ್ತದಾನ ಮಾಡಿ ಜೀವಿ ಉಳಿಸಿ ಎಂದು ಯುವ ರಕ್ತದಾನಿಗಳಿಗೆ ಇದೇ ಸಂದರ್ಭದಲ್ಲಿ ಸಲಹೆ ನೀಡಿದರು.
ಮುಖಂಡ ಬಿಸ್ತುವಳ್ಳಿ ಬಾಬು ಮಾತನಾಡಿ ಶಿಬಿರದಲ್ಲಿ ಸುಮಾರು 80 ಕ್ಕೂ ಹೆಚ್ಚು ಯುವಕರು ರಕ್ತದಾನ ಮಾಡಿದ್ದಾರೆ. ನಾವು ವೈಜ್ಞಾನಿಕವಾಗಿ ಎಷ್ಟೇ ಮುಂದುವರೆದಿದ್ದರೂ ಕೃತಕ ರಕ್ತ ತಯಾರಿಸಲು ಸಾಧ್ಯವಾಗಿಲ್ಲ. ಅಪಘಾತ, ಇನ್ನಿತರೆ ತುರ್ತು ಪರಿಸ್ಥಿತಿಯಲ್ಲಿ ರಕ್ತದ ಅವಶ್ಯಕತೆ ಇರುವ ರೋಗಿಗಳಿಗೆ ಸಂಗ್ರಹಿತ ರಕ್ತ ಉಪಯುಕ್ತವಾಗುತ್ತದೆ. ಇಂತಹ ಶಿಬಿರಗಳನ್ನು ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಆಯೋಜಿಸ ಲಾಗುವುದು. ರಕ್ತದಾನದಿಂದ ಪ್ರತಿಯೊಬ್ಬರೂ ಆರೋಗ್ಯಕರವಾಗಿ ಜೀವಿಸಲು ಸಾದ್ಯವಾಗಿದೆ ಈ ದೆಸೆಯಿಂದ ರಕ್ತದಾನದ ಬಗ್ಗೆ ತಾತ್ಸಾರ ಭಯದ ಮನೋಭಾವನೆ ಬೇಡ ಎಂದು ಎಂದು ಅಭಿಪ್ರಾಯಿಸಿದರು.
ಈ ಸಂದರ್ಭದಲ್ಲಿ ಜಿಪಂ ಸದಸ್ಯರಾದ ಶಾಂತಕುಮಾರಿ, ಎಸ್‍ಕೆ ಮಂಜುನಾಥ್ ಡಾ.ಚಂದ್ರಶೇಖರ್, ತಾಲ್ಲೂಕು ಬಿಜೆಪಿ ಅಧ್ಯಕ್ಷ ಡಿ.ವಿ.ನಾಗಪ್ಪ, ಪಟ್ಟಣ ಪಂಚಾಯಿತಿ ಸದಸ್ಯರುಗಳಾದ ತಿಪ್ಪೇಸ್ವಾಮಿ, ಪಾಪಲಿಂಗಪ್ಪ,ನವೀನ್ ಮುಖಂಡರುಗಳಾದ ಹನುಮಂತಣ್ಣ ಸೇರಿದಂತೆ ಸ್ವಯಂಸೇವಕರು ಪಾಲ್ಗೊಂಡಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ