ಬೆಂಗಳೂರು
ಐಶಾರಾಮಿ ಬಿಎಂಡಬ್ಲ್ಯೂ ಕಾರು ನೋಡ ನೋಡುತ್ತಿದ್ದಂತೆ ಬೆಂಕಿಗೆ ಆಹುತಿಯಾದ ಘಟನೆ ಪೀಣ್ಯ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ದಾಸರಹಳ್ಳಿ ಸಮೀಪದ 8ನೇ ಮೈಲಿಯ ಬಳಿ ನಡೆದಿದೆ.
8ನೇ ಮೈಲಿಯ ರಸ್ತೆ ಬದಿಯಲ್ಲಿ ದೆಹಲಿ ನೋಂದಣಿಯ ಬಿಎಂಡಬ್ಲ್ಯೂ ಕಾರನ್ನು ನಿಲ್ಲಿಸಲಾಗಿತ್ತು ಕಾರಿಗೆ ಏಕಾಏಕಿ ಬೆಂಕಿ ಕಾಣಿಸಿಕೊಂಡು ಕಾರು ಹೊತ್ತಿ ಉರಿದಿದ್ದು . ಅದೃಷ್ಟವಶಾತ್ ಕಾರಿನಲ್ಲಿದ್ದ ನಾಲ್ವರು ಕ್ಷಣಾರ್ಧದಲ್ಲಿ ಪಾರಾಗಿದ್ದಾರೆ.ಕಾರಿಗೆ ಬೆಂಕಿ ಹೊತ್ತಿಕೊಂಡಿದ್ದನ್ನು ನೋಡುತ್ತಿದ್ದಂತೆ ಸಮೀಪದಲ್ಲಿದ್ದ ಜನರು ಆತಂಕದಿಂದ ಓಡಿಹೋಗಿದ್ದಾರೆ.ಈ ಕುರಿತು ಸ್ಥಳೀಯರು ಮಾಹಿತಿ ನೀಡುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಪೀಣ್ಯ ಅಗ್ನಿಶಾಮಕ ದಳವು ಬೆಂಕಿಯನ್ನು ನಂದಿಸಿದೆ.
ಈ ಘಟನೆಯಿಂದಾಗಿ ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲ ಹೊತ್ತು ವಾಹನ ಸಂಚಾರ ಅಸ್ತವ್ಯಸ್ತವಾಗಿದ್ದು ಸುದ್ದಿ ತಿಳಿದ ತಕ್ಷಣ ಪೀಣ್ಯ ಸಂಚಾರ ಪೊಲೀಸರು ಸ್ಥಳಕ್ಕೆ ಧಾವಿಸಿ ಸುಟ್ಟ ವಾಹನವನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.ಶಾರ್ಟ್ ಸರ್ಕ್ಯೂಟ್‍ನಿಂದ ಬೆಂಕಿ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








