ಸವಾಲುಗಳ ವರ್ಷಕ್ಕೆ ಪರಿಹಾರದ ಸ್ಪರ್ಶ ನೀಡಿದ ಸಿಎಂ ಬಿ.ಎಸ್.ವೈ

ಬಳ್ಳಾರಿ

    ರಾಜ್ಯ ಸರ್ಕಾರ ಒಂದು ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಮಾನ್ಯ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ವಿಧಾನಸೌಧದಲ್ಲಿ “ಸವಾಲುಗಳ ವರ್ಷ; ಪರಿಹಾರದ ಸ್ಪರ್ಶ” ಕಾರ್ಯಕ್ರಮ ನಡೆಯಿತು.ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಏಕಕಾಲಕ್ಕೆ ನೇರಪ್ರಸಾರ ವ್ಯವಸ್ಥೆ ಮಾಡಲಾಗಿತ್ತು. ಅದೇ ರೀತಿ ಬಳ್ಳಾರಿ ಜಿಲ್ಲಾ ಪಂಚಾಯತ್ ನಜೀರ್ ಸಭಾಂಗಣದಲ್ಲಿ ಕೂಡ ಈ ಕಾರ್ಯಕ್ರಮ ನೇರ ಪ್ರಸಾರವಾಯಿತು.

    ಜಿಲ್ಲಾಮಟ್ಟದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಳ್ಳಾರಿ ನಗರ ಶಾಸಕ ಜಿ.ಸೋಮಶೇಖರ್ ರೆಡ್ಡಿ ಅವರು ಸರ್ಕಾರದ ವರ್ಷದ ಪ್ರಗತಿ ವಿವರ ಒಳಗೊಂಡ ವಿಶೇಷ ಪುಸ್ತಕ ಮತ್ತು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ “ಜನಪದ” ಹಾಗೂ “ಮಾರ್ಚ್ ಆaxಫ್ ಕರ್ನಾಟಕ” ಮಾಸಿಕಗಳನ್ನು ಬಿಡುಗಡೆಗೊಳಿಸಿದರು.

    ಈ ಸಂದರ್ಭದಲ್ಲಿ ಸಂಸದ ವೈ.ದೇವೇಂದ್ರಪ್ಪ, ಜಿಲ್ಲಾಧಿಕಾರಿ ಎಸ್.ಎಸ್.ನಕುಲ್, ಜಿಪಂ ಸಿಇಒ ಕೆ.ನಿತೀಶ್, ಎಸ್ಪಿ ಸಿ.ಕೆ.ಬಾಬಾ, ಅಪರ ಜಿಲ್ಲಾಧಿಕಾರಿ ಪಿ.ಎಸ್.ಮಂಜುನಾಥ, ವಾರ್ತಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಬಿ.ಕೆ.ರಾಮಲಿಂಗಪ್ಪ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಇದ್ದರು.

    ಕೋವಿಡ್ ನಿಂದ ಗುಣಮುಖರಾದ ಖಾಜಾ ಅಸೀಫ್, ಎಸ್.ಬಿ.ಲಕ್ಷ್ಮೀದೇವಿ, ರಫಿ, ರೇμÁ್ಮ, ಸಂತೋಷನಾಯಕ, ಹಾಲಪ್ಪ ಕುಡಿತಿನಿ, ಕಾರ್ಮಿಕ ಇಲಾಖೆಯ ಸೌಲಭ್ಯ ಪಡೆದ ಅಸಂಘಟಿತ ಕಾರ್ಮಿಕರಾದ ಕೊಲ್ಲಣ್ಣ, ಚಾಂದಪಾಶಾ, ಮೌನೇಶ್, ಕಿಶನ್, ವಿಜಯಕುಮಾರ್ ಸೇರಿದಂತೆ ವಿವಿಧ ಯೋಜನೆಗಳ ಫಲಾನುಭವಿಗಳು ಕೂಡ ಹಾಜರಿದ್ದರು.

    ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ವಿವಿಧ ಯೋಜನೆಗಳ ಫಲಾನುಭವಿಗಳ ಜತೆ ಸಂವಾದ ನಡೆಸಿ ನಂತರ ಮಾತನಾಡಿದರು. ಉಪಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ, ಅಶ್ವತ್ ನಾರಾಯಣ ಮಾತನಾಡಿದರು.

    ಇಂದಿನ ನೇರಪ್ರಸಾರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕೋವಿಡ್ ನಿಂದ ಗುಣಮುಖರಾದ ಹಾಲಪ್ಪ ಕುಡಿತಿನಿ ಅವರು ಮಾತನಾಡಿ, ಸಮಯದ ಅಭಾವದಿಂದ ಮುಖ್ಯಮಂತ್ರಿಗಳ ಜತೆ ಮಾತನಾಡಲಾಗಲಿಲ್ಲ; ಆದ್ರೇ ಅವರ ನೇರ ಪ್ರಸಾರ ಕಾರ್ಯಕ್ರಮ ವೀಕ್ಷಿಸಿ ಖುಷಿಯಾಯ್ತು. ನನಗೆ ಕೋವಿಡ್ ಬಂದ ಸಂದರ್ಭದಲ್ಲಿ ತುಂಬಾ ಆತಂಕಕ್ಕೆ ಒಳಗಾಗಿದ್ದೇ ಮತ್ತು ಮುಂದೇನು ಎಂದು ಚಿಂತೆ ಮಾಡಿದ್ದೇ; ಇಡೀ ಕುಟುಂಬವೇ ಕಣ್ಣೀರು ಹಾಕಿತ್ತು. ಇಂತಹ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು, ವೈದ್ಯಾಧಿಕಾರಿಗಳು ಚಿಕಿತ್ಸೆ ಸಮಯದಲ್ಲಿ ಸೂಕ್ತ ಚಿಕಿತ್ಸೆ ನೀಡಿ ಆತ್ಮಸ್ಥೈರ್ಯ ತುಂಬಿ ಗುಣಮುಖರಾಗುವಂತೆ ಮಾಡಿದರು ಎಂದು ಸ್ಮರಿಸಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap