ಬೆಂಗಳೂರು
ರಾಜ್ಯದ ಪ್ರಮುಖ ಕೋವಿಡ್ ಆಸ್ಪತ್ರೆಯಾದ ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಯ ನಿರ್ದೇಶಕ ಡಾ. ಮಂಜುನಾಥ್ ಅವರನ್ನು ಸರ್ಕಾರ ಆರು ವಾರಗಳ ಕಾಲ ದಿಢೀರ್ ರಜೆ ಮೇಲೆ ಕಳುಹಿಸಿದೆ.
ಕೋವಿಡ್ ಸಾಮಗ್ರಿ ಖರಿದಿಯಲ್ಲಿ ಅಕ್ರಮ ಎಸಗಿದ ಭ್ರಷ್ಟ ಬಿಜೆಪಿ ಸರ್ಕಾರ ಈಗ ಆಸ್ಪತ್ರೆ ವೈದ್ಯರನ್ನು ಧಿಡೀರ್ ರಜೆ ಮೇಲೆ ಕಳಿಸಿದ್ದಾರೆ. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ಕೋವಿಡ್ ಸಮಸ್ಯೆ ಇರುವಾಗಲೇ ಏಕಾಏಕಿ ನಿರ್ದೇಶಕರನ್ನು ಬದಲಾಯಿಸಿ ನಿರ್ದೇಶಕರನ್ನು ರಜೆ ಮೇಲೆ ಕಳುಹಿಸಿರುವ ಹಿಂದಿನ ಹಿತಾಸಕ್ತಿಯಾದರೂ ಏನು? ಎಂದು ಪ್ರಶ್ನಿಸಿದ್ದಾರೆ.
ಆಸ್ಪತ್ರೆಗೆ ಸಂಬಂಧವೇ ಇಲ್ಲದವರನ್ನು ನಿರ್ದೇಶಕರನ್ನಾಗಿಸುವ ಪ್ರಯತ್ನ ನಡೆದಿದೆ. ಸ್ವತಃ ಬೌರಿಂಗ್ ಆಸ್ಪತ್ರೆ ವೈದ್ಯರೇ ಸಚಿವರಿಗೆ ಪತ್ರ ಬರೆದು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಮೂಗಿನ ಕೆಳಗೆ ಎಲ್ಲವೂ ನಡೆಯುತ್ತಲ್ಲೇ ಇದ್ದರೂ ಸುಧಾಕರ್ ಸುಮ್ಮನಿರುವುದು ಏಕೆ? ಎಂದು ಖಂಡ್ರೆ ಟ್ವೀಟ್ ಮೂಲಕ ಸಚಿವರನ್ನು ಪ್ರಶ್ನಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








