ತುಮಕೂರು
ತನ್ನನ್ನು ಬಿಟ್ಟು ಬೇರೊಬ್ಬನ ಜೊತೆ ಸಲುಗೆ ಬೆಳೆಸಿಕೊಂಡಿದ್ದ ಪ್ರೇಯಸಿಯನ್ನು ಕೊಂದ ಪ್ರಿಯಕರನನ್ನು ಹುಲಿಯೂರುದುರ್ಗ ಪೊಲೀಸರು ಬಂಧಿಸಿದ್ದಾರೆ.
ನಗರದ ಗೊರಗುಂಟೆಪಾಳ್ಯದ ಹೆಚ್‍ಪಿ ಪೆಟ್ರೋಲ್ ಬಂಕ್‍ವೊಂದರಲ್ಲಿ ಕೆಲಸ ಮಾಡುತ್ತಿದ್ದ ಅರ್ಪಿತಾ(26)ರನ್ನು ಕೊಲೆಗೈದು ಪರಾರಿಯಾಗಿದ್ದ ನಗರದ ಲೋಹಿತ್(27) ಬಂಧಿತ ಆರೋಪಿಯಾಗಿದ್ದಾನೆ.
ಕಳೆದ ಫೆ.3ರಂದು ಕುಣಿಗಲ್ ತಾಲೂಕಿನ ಸಂತೆಮಾವತ್ತೂರಿನಲ್ಲಿ ಲೋಹಿತ್ ತನ್ನ ಪ್ರೇಯಸಿ ಅರ್ಪಿತಾ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿ ಪರಾರಿಯಾಗಿದ್ದನು.ಅರ್ಪಿತಾ ತನ್ನನ್ನು ಬಿಟ್ಟು ಬೇರೊಬ್ಬ ಯುವಕನ ಜೊತೆ ಸುತ್ತಾಡುತ್ತಿರುವುದು ಗೊತ್ತಾಗಿ ಹಲವು ಬಾರಿ ಎಚ್ಚರಿಕೆ ನೀಡಿದ್ದರೂ ಆಕೆಯ ನಡತೆ ಸರಿಹೋಗದಿದ್ದರಿಂದ ಕೊಲೆ ಮಾಡಿರುವುದನ್ನು ಲೋಹಿತ್ ಒಪ್ಪಿಕೊಂಡಿದ್ದಾನೆ.
ಯುವತಿ ಧರಿಸಿದ್ದ ಎಚ್‍ಪಿ ಪೆಟ್ರೋಲ್ ಬಂಕ್ ಸಮವಸ್ತ್ರ ಆಧರಿಸಿ ಕೊಲೆ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡ ಹುಲಿಯೂರುದುರ್ಗ ಪೊಲೀಸರು ಆರೋಪಿ ಲೋಹಿತ್‍ನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.