ಹಳೆ ಪಿಂಚಣಿ ಜಾರಿಗಾಗಿ ಹಕ್ಕೊತ್ತಾಯ: ರಕ್ತಕೊಟ್ಟೇವು ಪಿಂಚಣಿ ಬಿಡೆವು

ತಿಪಟೂರು

     ಹಳೆ ಪಿಂಚಣಿ ಜಾರಿಗಾಗಿ ಹಕ್ಕೊತ್ತಾಯ : ರಕ್ತಕೊಟ್ಟೇವು ಪಿಂಚಣಿ ಬಿಡೆವು ಎಂದು ಕರ್ನಾಟಕ ರಾಜ್ಯ ಎನ್.ಪಿ.ಎಸ್.ನೌಕರರ ಸಂಘದಿಂದ ತಹಸೀಲ್ದಾರ್‍ರಿಗೆ ಮನವಿ ಸಲ್ಲಿಸಲಾಯಿತು.

       ನಗರದಲ್ಲಿ ಎನ್.ಪಿ.ಎಸ್ ಸರ್ಕಾರಿ ನೌಕರರು ದಿನಾಂಕ:01-04-2006 ರಿಂದ ಸರ್ಕಾರಿ ಸೇವೆಗೆ ಸೇರಿರುವ ರಾಷ್ಟ್ರೀಯ ಪಿಂಚಣಿ ಯೋಜನೆಗೆ ಒಳಪಡುವ ನೌಕರರು ಸಂಧ್ಯಾಕಾಲದಲ್ಲಿ ಬದುಕಿಗೆ ಭದ್ರತೆಯನ್ನು ತಂದುಕೊಡುವ ನಿಟ್ಟಿನಲ್ಲಿ ಹಾಗೂ ಈಗಾಗಲೇ ಮರಣಹೊಂದಿರುವ ಎನ್.ಪಿ.ಎಸ್ ನೌಕರರ ಅವಲಂಬಿತ ಕುಟುಂಬಗಳಿಗೆ ನ್ಯಾಯ ಒದಗಿಸುವ ಹಂಬಲದೊಂದಿಗೆ ನಾವು ಕಾರ್ಯನಿರ್ವಹಿಸುತ್ತಿದ್ದೇವೆ.

     ನೌಕರರ ಇಳಿವಯಸ್ಸಿನಲ್ಲಿ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆಗಾಗಿ ರೂಪಿಸಿದ ನಿಶ್ಚಿತ ಪಿಂಚಣಿಯನ್ನು ಕೇಂದ್ರ ಸರ್ಕಾರವು ದಿನಾಂಕ: 01-04-2004 ರ ನಂತರ ನಮ್ಮ ರಾಜ್ಯ ಸರ್ಕಾರವು ದಿನಾಂಕ: 01-04-2006ರ ನಂತರ ಸರ್ಕಾರಿ ಸೇವೆಗೆ ನೇಮಕಗೊಳ್ಳುವ ನೌಕರರಿಗೆ ನಿಶ್ಚಿತ ಪಿಂಚಣಿ ಪದ್ಧತಿಯನ್ನು ರದ್ದುಮಾಡಿತು.

      ನೂತನ ಪಿಂಚಣಿ ಯೋಜನೆಯಡಿ ನೌಕರರಿಗೆ ನೀಡುವ ಉದ್ದೇಶಕ್ಕಾಗಿ ನೌಕರರ ವೇತನದಿಂದ ಶೇ.10ರಷ್ಟನ್ನು ಕಟಾವುಗೊಳಿಸಲಾಗುತ್ತದೆ ಹಾಗೂ ಸರ್ಕಾರವು ಅದಕ್ಕೆ ಸಮಾನವಾದ ಮೊತ್ತವನ್ನು ವಂತಿಗೆ ರೂಪದಲ್ಲಿ ನೀಡುತ್ತಿದೆ. ಹಾಗೆ ಶೇಖರಣೆಗೊಳ್ಳುವ ಮೊತ್ತವನ್ನು ವಿವಿಧ ಖಾಸಗಿ ಹಣಕಾಸಿನ ಸಂಸ್ಥೆಗಳ ಮೂಲಕ ಷೇರು ಪೇಟೆಯಲ್ಲಿ ತೊಡಗಿಸಲಾಗುತ್ತದೆ.

     30-35 ವರ್ಷಗಳ ನಂತರ ಅದರಿಂದ ಬಂದ ಲಾಭದಲ್ಲಿ ಈ ಹಣವನ್ನು ಉಪಯೋಗಿಸಿದ ಕಂಪನಿಗಳು ನೌಕರರಿಗೆ ಪಿಂಚಣಿಯನ್ನು ನೀಡುತ್ತವೆ. ಇದಕ್ಕಾಗಿ ಯಾವುದೇ ನಿರ್ಧಿಷ್ಟ ಕಾನೂನುಗಳನ್ನು ರಚಿಸದೆ, ನೌಕರರ ಹಾಗೂ ಸರ್ಕಾರವು ತೊಡಗಿಸಿದ ಹಣಕ್ಕೆ ಯಾವುದೇ ಭದ್ರತೆ ನೀಡದೆ ಈ ಹೊಸ ಪಂಚಣಿ ಯೋಜನೆಯನ್ನು ಘೋಷಿಸಲಾಗಿದೆ. ಸದರಿ ಕಾಯ್ದೆಯನ್ವಯ ನೌಕರರ ವಂತಿಗೆ ಹಣಕ್ಕೆ ಯಾವುದೇ ಕನಿಷ್ಠ ಭದ್ರತೆಯನ್ನು ನೀಡಿರುವುದಿಲ್ಲ.

     ಇದು ನೌಕರರ ಸಂಧ್ಯಾಕಾಲದ ಜೀವನವನ್ನು ಅಭದ್ರತೆಗೆ ತಳ್ಳಲು ಕಾರಣವಾಗುತ್ತದೆ. ಅಲ್ಲದೆ ನೂತನ ಪಿಂಚಣಿ ವ್ಯವಸ್ಥೆಯು ಸರ್ಕಾರದ ಹಾಗೂ ಸರ್ಕಾರಿ ನೌಕರರ ನಡುವೆ ಇರುವ ಸಂಬಂಧವನ್ನು ದೂರಮಾಡಿವೆ. ಪ್ರಸ್ತುತ ಜಾರಿಗೊಳಿಸಿರುವ ಈ ಯೋಜನೆಯು ಪ್ರಪಂಚದ ಅನೇಕ ದೇಶಗಳಲ್ಲಿ ವಿಫಲಗೊಂಡ ಪಿಂಚಣಿಯೋಜನೆ ಇದಾಗಿದೆ. ಇದೆಲ್ಲಾ ತಿಳಿದಿದ್ದರೂ ಸಹ ನಮ್ಮ ಸರ್ಕಾರಗಳು ನಮ್ಮ ನೌಕರರನ್ನು ಅನಿಶ್ಚಿತ ಸ್ಥಿತಿಗೆ ನೂಕುತ್ತಿರುವುದು ಒಂದು ವಿಪರ್ಯಾಸದ ಸಂಗತಿಯಾಗಿದೆ.

     ಈ ಎಲ್ಲಾ ಅಂಶಗಳ ಹಿನ್ನೆಲೆಯಲ್ಲಿ ಸರ್ಕಾರವು ದಿ:01-04-2006ಕ್ಕಿಂತ ಹಿಂದೆ ಸರ್ಕಾರಿ ನೌಕರರಿಗೆ ಸೇರುವ ಸಿಬ್ಬಂದಿಗಳಿಗೆ ನೀಡುತ್ತಿರುವ ನಿವೃತ್ತಿ ಸೌಲಭ್ಯಗಳನ್ನೇ ಎನ್.ಪಿ.ಎಸ್ ನೌಕರರಿಗೂ ವಿಸ್ತರಿಸುವಂತೆ ಕೋರಿ ಕರ್ನಾಟಕ ರಾಜ್ಯ ಸರ್ಕಾರಿ ಎನ್.ಪಿ.ಎಸ್ ನೌಕರರ ಸಂಘವು ಕೋರುತ್ತದೆ.

        ಈ ನಮ್ಮ ಬೇಡಿಕೆಯನ್ನು ತಾವು ವಿಧಾನಮಂಡಲ ಹಾಗೂ ಸಂಸತ್ತಿನಲ್ಲಿ ಸರ್ಕಾರದ ಗಮನ ಸೆಳೆಯುವ ಮೂಲಕ ನೂತನ ಪಂಚಣಿಯೋಜನೆಯನ್ನು ರದ್ದುಗೊಳಿಸುವಂತೆ ಸರ್ಕಾರವನ್ನು ಒತ್ತಾಯಿಸಬೇಕಾಗಿ ಕೋರುತ್ತೇವೆ. ಇದೇ ಮುಂದುವರೆದರೆ ನೂತನ ಪಿಂಚಣ Âಯೋಜನೆಯನ್ನು ವಿರೋಧಿಸಿ ನಡೆಯುತ್ತಿರುವ ಹೋರಾಟವನ್ನು ಕೇಂದ್ರ ಸರ್ಕಾರವು ಗಂಭೀರವಾಗಿ ಪರಿಗಣಿಸಿ ನಮಗೆ ನ್ಯಾಯದೊರಕಿಸಿ ಕೊಡಬೇಕೆಂದು ತಾಲ್ಲೂಕಿನ ತಹಸೀಲ್ದಾರರಿಗೆ ಮನವಿ ಸಲ್ಲಿಸಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ   

Recent Articles

spot_img

Related Stories

Share via
Copy link