ಮತ್ತೊಮ್ಮೆ ಬಿಜೆಪಿ ಸರ್ಕಾರವನ್ನು ಅಧಿಕಾರಿಕ್ಕೆ ತರಲಿದೆ.

ಚಳ್ಳಕೆರೆ

       ರಾಷ್ಟ್ರದಲ್ಲಿ ಕಳೆದ ಸುಮಾರು 5 ವರ್ಷಗಳಿಂದ ಎನ್‍ಡಿಎ ನೇತೃತ್ವದ ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ನರೇಂದ್ರ ದಾಮೋದರ ಮೋದಿ ಉತ್ತಮ ಆಡಳಿತ ನೀಡುವ ಮೂಲಕ ಇಂದು ರಾಷ್ಟ್ರದ ಜನರ ಮನವನ್ನು ಗೆದಿದ್ದು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಚಿತ್ರದುರ್ಗ ಲೋಕಸಭಾ ಕ್ಷೇತ್ರವೂ ಸೇರಿದಂತೆ ಬಹುತೇಕ ಕ್ಷೇತ್ರದಲ್ಲಿ ಬಿಜೆಪಿ ಜಯಗಳಿಸಲಿದೆ ಎಂಬ ಆತ್ಮವಿಶ್ವಾಸವನ್ನು ಮಾಜಿ ಸಮಾಜ ಕಲ್ಯಾಣ ಸಚಿವ, ಬಿಜೆಪಿ ಪರಿಶಿಷ್ಟ ಜಾತಿ ವಿಭಾಗದ ಹಿರಿಯ ಮುಖಂಡ ಆನೇಕಲ್ ನಾರಾಯಣಸ್ವಾಮಿ ತಿಳಿಸಿದ್ಧಾರೆ.

         ಅವರು, ಭಾನುವಾರ ಖಾಸಗಿ ಕಾರ್ಯಕ್ರಮವೊಂದಕ್ಕೆ ನಾಯಕನಹಟ್ಟಿಗೆ ಹೋಗುವ ಮಾರ್ಗದಲ್ಲಿ ಚಳ್ಳಕೆರೆಯ ಬಿಜೆಪಿ ಮಾಜಿ ಶಾಸಕ, ಹಿರಿಯ ದುರೀಣ ಜಿ.ಬಸವರಾಜ್ ಮಂಡಿಮಠರವರನ್ನು ಭೇಟಿ ಮಾಡಿ, ಪಕ್ಷದ ಸಂಘಟನೆಯ ಬಗ್ಗೆ ಲೋಕಾಭಿರಾಮವಾಗಿ ಚರ್ಚಿಸಿ ನಂತರ ಪತ್ರಿಕೆಯೊಂದಿಗೆ ಮಾತನಾಡಿದರು. ನಾನು ಖಾಸಗಿ ಕಾರ್ಯಕ್ಕೆ ಆಗಮಿಸಿದ್ದು, ಈ ಸಂದರ್ಭದಲ್ಲಿ ಪಕ್ಷದ ಹಿರಿಯ ಮುಖಂಡರನ್ನು ಭೇಟಿ ಮಾಡಿ ಸೌಜನ್ಯವಾಗಿ ಚರ್ಚಿಸಿದ್ದೇನೆ.

         ಜಿ.ಬಸವರಾಜ ಮಂಡಿಮಠರವರು ಮಾಡಿದ ಸೇವೆಯನ್ನು ಈ ಕ್ಷೇತ್ರದ ಜನತೆ ಎಂದೂ ಮರೆಯಲಾರರು. ವಿಶೇಷವಾಗಿ ಈ ಕ್ಷೇತ್ರ ವ್ಯಾಪ್ತಿಯ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಮತ್ತು ಹಿಂದುಳಿದ ವರ್ಗದ ಸುಮಾರು 25 ಸಾವಿರ ಫಲಾನುಭವಿಗಳಿಗೆ ಬಗರ್ ಹುಕ್ಕುಂ ಸಾಗುವಳಿ ಪತ್ರ ನೀಡುವ ಮೂಲಕ ಮಂಡಿಮಠ್ ರಾಜ್ಯದ ಮನೆ ಮಾತಾಗಿದ್ದಾರೆಂದರು.

         ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗುವ ಸಂಭವಿದೆ ಎಂದು ಪ್ರಶ್ನಿಸಿದಾಗ, ಈಗಾಗಲೇ ಹಲವಾರು ಮುಖಂಡು ಈ ಕ್ಷೇತ್ರದ ಆಕಾಂಕ್ಷಿಗಳಾಗಿದ್ದಾರೆ. ನಾನು ಪಕ್ಷದ ಶಿಸ್ತಿನ ಸಿಪಾಯಿಯಾಗಿದ್ದು, ಪಕ್ಷದ ಬಯಸಿದಲ್ಲಿ ಮಾತ್ರ ಕಾರ್ಯಕರ್ತರೊಂದಿಗೆ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳುವೆ. ಈ ಕ್ಷೇತ್ರದ ಹಲವಾರು ವಿವಿಧ ಸಮುದಾಯದ ಮುಖಂಡರು ನನ್ನ ಮೇಲೆ ನಿರಂತರ ಒತ್ತಡ ಹೇರುತ್ತಿದ್ದು, ಈ ಬಗ್ಗೆ ಅಂತಿಮ ತೀರ್ಮಾನವನ್ನು ಪಕ್ಷ ಕೈಗೊಳ್ಳಬೇಕು ಎಂದರು.

          ಇಲ್ಲಿನ ನೆಹರೂ ಸರ್ಕಲ್‍ನಲ್ಲಿ ನಾರಾಯಣಸ್ವಾಮಿಯವರನ್ನು ಭೇಟಿ ಮಾಡಿದ ಮಾಜಿ ಪುರಸಭಾ ಸದಸ್ಯ ಎಂ.ಶಿವಮೂರ್ತಿ ತಮ್ಮ ಹಲವಾರು ಬೆಂಬಲಿಗರೊಂದಿಗೆ ಪಟಾಕಿ ಸಿಡಿಸಿ ಸಂತಸ ವ್ಯಕ್ತಪಡಿಸಿ, ನಮ್ಮ ಜನಾಂಗದ ಹಿರಿಯ ಮುಖಂಡರಾದ ತಾವು ಚಿತ್ರದುರ್ಗ ಲೋಕಸಭಾ ಕ್ಷೇತ್ರದಿಂದ ಬಿಜೆಪಿಯಲ್ಲಿ ಸ್ಪರ್ಧಿಸುವಂತೆ ಸಮುದಾಯದ ಪರವಾಗಿ ಮನವಿ ಮಾಡಿದರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಬಾಳೆಮಂಡಿ ರಾವದಾಸ್, ಮುಖಂಡರಾದ ಶ್ರೀನಿವಾಸ್, ಮಾರುತಿ, ಹೊಟ್ಟೆಪ್ಪನಹಳ್ಳಿ ಕಾಂತರಾಜು ಮುಂತಾದವರು ಇದ್ದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link