ಬೆಂಗಳೂರು:
ಪರಿಶಿಷ್ಟರಿಗೆ ಒಳ ಮೀಸಲಾತಿ ಕಲ್ಪಿಸುವ ನ್ಯಾಯ ಮೂರ್ತಿ ಸದಾಶಿವ ಆಯೋಗದ ವರದಿಯನ್ನು ಅನುಷ್ಟಾನಗೊಳಿಸುವಂತೆ ಆಗ್ರಹಿಸಿ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ರಾಜ್ಯ ಮಾದಿಗ ಸಂಘಟನೆಗಳ ಮಹಾಸಭ ಹಮ್ಮಿಕೊಂಡಿದ್ದ ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹ ಬುಧುವಾರ 2ಣೇ ದಿನಕ್ಕೆ ಕಾಲಿಟ್ಟಿದೆ.
ಸುದ್ದಿಗಾರರೊಂದಿಗೆ ಮಾತನಾಡಿದ ಮಹಾಸಭಾ ರಾಜ್ಯಾಧ್ಯಕ್ಷ ಅಂಬಣ್ಣ ಅರೋಲಿಕರ್, ಪರಿಶಿಷ್ಟರಿಗೆ ಒಳ ಮೀಸಲಾತಿ ಕಲ್ಪಿಸುವ ಸದಾಶಿವ ಆಯೋಗದ ವರದಿಯನ್ನು ಅನುಷ್ಠಾನಗೊಳಿಸಲು ಛಲವಾದಿ ಸಮಾಜದ ಹಿರಿಯ ರಾಜಕೀಯ ಮುಖಂಡರಾದ ಮಲ್ಲಿಕಾರ್ಜುನ ಖರ್ಗೆ ಹಾಗೂ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರ ಸಂಪೂರ್ಣ ವಿರೋಧವಿದೆ ಎಂದರು.
ನ್ಯಾಯಮೂರ್ತಿ ಸದಾಶಿವ ಅವರು ತಮ್ಮ ವರದಿಯಲ್ಲಿ ಪರಿಶಿಷ್ಟ ಜಾತಿಗಳಲ್ಲಿನ 51 ಜಾತಿಗಳ ಹಿಂದುಳಿವಿಕೆಯನ್ನು ಗಂಭೀರವಾಗಿ ಪರಿಗಣಿಸಿ ಶೇ. 6 ರಷ್ಟು ಮೀಸಲಾತಿ ನಿಗಧಿಪಡಿಸಿದ್ದು, ಬಲಗೈ ಸಮುದಾಯಗಳ 34 ಉಪ ಜಾತಿಗಳಿಗೆ ಶೇ. 5 ರಷ್ಟು ಮೀಸಲಾತಿ ಹಾಗೂ 9 ಸ್ಪಶ್ರ್ಯ ಜಾತಿಗಳಿಗೂ ಶೇ. 3 ರಷ್ಟು ನಿಗಧಿಪಡಿಸಿರುತ್ತಾರೆ ಆದರೆ ಯಾವುದೇ ರಾಜಕೀಯ ಪಕ್ಷಗಳು ಸದಾಶಿವ ಆಯೋಗದ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಿಕೊಡಲು ಹಿಂದೇಟು ಹಾಕುತ್ತಿರುವುದು ಕಾಕತಾಳಿಯ ಎಂದರು.
ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿಯನ್ನು ಅನುಷ್ಠಾನಗೊಳಿಸಲು ಹಿಂದೇಟು ಹಾಕಿರುವ ರಾಜ್ಯ ಸರ್ಕಾರ ಪ್ರಸ್ತುತ ಆದಿ ಜಾಂಬವ ಅಭಿವೃದ್ಧಿ ನಿಗಮವನ್ನು ಜಾರಿ ತಂದಿದೆ. ಇದು ಸರಿಯಾದ ಕ್ರಮವಲ್ಲ ಆಯೋಗದ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಶಿಪಾರಸ್ಸು ಮಾಡುವಂತೆ ಆಗ್ರಹಿಸಿ ಇದೇ 22 ರಂದು ಬೆಂಗಳೂರು ಬಂದ್‍ಗೆ ಕರೆ ನೀಡಲಾಗಿದೆ ಎಂದು ತಿಳಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ