ಬೆಂಗಳೂರು
ಕತ್ತು ಸೀಳಿ ವ್ಯಕ್ತಿಯೊಬ್ಬರನ್ನು ಬರ್ಬರವಾಗಿ ಕೊಲೆ ಮಾಡಿರುವ ದುರ್ಘಟನೆ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕೆಂಪಲಿಂಗನಹಳ್ಳಿ ಬಳಿ ನಡೆದಿದೆ.
ಕೊಲೆಯಾಗಿರುವ ವ್ಯಕ್ತಿಯು ಸುಮಾರು 40 ವರ್ಷದವರಾಗಿದ್ದು ಸದ್ಯಕ್ಕೆ ಅವರ ಹೆಸರು ವಿಳಾಸ ಪತ್ತೆಯಾಗಿಲ್ಲ.ಕೆಂಪಲಿಂಗನಹಳ್ಳಿಯ ಬಿಪಿ ಇಂಡಿಯನ್ ಖಾಸಗಿ ಶಾಲೆಯ ಬಳಿಯ ಬಸ್ ನಿಲ್ದಾಣದ ಬಳಿ ಮೃತ ವ್ಯಕ್ತಿಯನ್ನು ಸೋಮವಾರ ಬೆಳಿಗ್ಗೆ ವಾಯವಿಹಾರಕ್ಕೆ ಹೋದವರು ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಕೂಡಲೇ ಸ್ಥಳಕ್ಕೆ ಧಾವಿಸಿದ ನೆಲಮಂಗಲ ಗ್ರಾಮಾಂತರ ಪೊಲೀಸರು ಪರಿಶೀಲನೆ ನಡೆಸಿದ್ದು ಬೇರೆಡೆ ಕೊಲೆ ಮಾಡಿ ಇಲ್ಲಿ ಶವವನ್ನು ತಂದು ಬಿಸಾಡಿರುವ ಶಂಕೆ ವ್ಯಕ್ತಯನ್ನು ವ್ಯಕ್ತಪಡಿಸಿದ್ದಾರೆ.
ಮೃತದೇಹವನ್ನು ನೆಲಮಂಗಲದ ಆಸ್ಪತ್ರೆಯ ಶವಗಾರಕ್ಕೆ ರವಾನಿಸಿದ್ದಾರೆ. ಪ್ರಕರಣ ದಾಖಲಿಸಿ ತನಿಖೆಯನ್ನು ಮುಂದುವರಿಸಿದ್ದಾರೆ ಎಂದು ಗ್ರಾಮಾಂತರ ಎಸ್‍ಪಿ ಡಾ.ರಾಮ್‍ನಿವಾಸ್ ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
