ಬೆಂಗಳೂರು
ವಿಧಾನಸಭೆಯ ಉಪಚುನಾವಣೆ, ಫಲಿತಾಂಶಕ್ಕೂ ಮುನ್ನವೇ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಧರ್ಮಸ್ಥಳ ಮಂಜುನಾಥನ ಮೊರೆ ಹೋಗಲಿದ್ದಾರೆ.ಇದೇ 9 ರಂದು 15 ವಿಧಾನಸಭಾ ಕ್ಷೇತ್ರಗಳ ಫಲಿತಾಂಶ ಪ್ರಕಟವಾಗಲಿದ್ದು ಅದಕ್ಕೆ ಒಂದು ದಿನ ಮೊದಲೇ ಅಂದರೆ ಇದೇ ಭಾನುವಾರ 8 ರಂದು ಮುಖ್ಯಮಂತ್ರಿ ಯಡಿಯೂರಪ್ಪ ಧರ್ಮಸ್ಥಳಕ್ಕೆ ಭೇಟಿ ನೀಡುತ್ತಿದ್ದಾರೆ.
ಆದರೆ ಚುನಾವಣಾ ಫಲಿತಾಂಶಕ್ಕೂ, ಮುಖ್ಯಮಂತ್ರಿಗಳ ಧರ್ಮಸ್ಥಳ ಭೇಟಿಗೂ ಯಾವುದೇ ಸಂಬಂಧ ಇಲ್ಲ ಎಂದು ಮುಖ್ಯಮಂತ್ರಿ ಕಚೇರಿ ಮೂಲಗಳು ತಿಳಿಸಿವೆ.ಒಂದು ತಿಂಗಳ ಮೊದಲೇ ಅವರ ಕಾರ್ಯಕ್ರಮ ನಿಗದಿಯಾಗಿತ್ತು. ಬೆಳ್ತಂಗಡಿ ತಾಲೂಕಿನಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಶಿಲಾನ್ಯಾಸ ನೆರವೇರಿಸುವ ಪೂರ್ವ ನಿಯೋಜಿತ ಕಾರ್ಯಕ್ರಮದಲ್ಲಿ ಭಾಗಿಯಾಗಲು ಮುಖ್ಯಮಂತ್ರಿ ಯಡಿಯೂರಪ್ಪ ಇದೇ 8 ರಂದು ಧರ್ಮಸ್ಥಳಕ್ಕೆ ಭೇಟಿ ನೀಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿ ಮೂಲಗಳು ಸ್ಪಷ್ಟಪಡಿಸಿವೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ