ಬಿ ಎಸ್ ವೈ ಅಧಿಕಾರಕ್ಕಾಗಿ ಮಾನವೀಯತೆಯನ್ನೆ ಮರೆತಿದ್ದಾರೆ: ಕುಮಾರ ಸ್ವಾಮಿ

ಬೆಂಗಳೂರು

     ಹಿಂದಿನ ಸರ್ಕಾರದಲ್ಲಿ ರೈತರನ್ನು ಕೊಂದಿದ್ದರು. ಈ ಬಾರಿ ಅಮಾಯಕ ಹೋರಾಟಗಾರರನ್ನು ಕೊಂದಿದ್ದಾರೆ. ನೈತಿಕ ಹೊಣೆಗಾರಿಕೆ ಅರಿತು ಈ ಕೂಡಲೇ ಗೋಲಿಬಾರ್‍ನಲ್ಲಿ ಮೃತಪಟ್ಟ ಹೋರಾಟಗಾರ ಕುಟುಂಬಗಳ ಬಳಿ ಅವರು ಕ್ಷಮೆ ಯಾಚಿಸಬೇಕೆಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್ ಶಾಸಕಾಂಗ ನಾಯಕ ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

     ಅಧಿಕಾರದ ಅಮಲಿನಲ್ಲಿರುವವರ ದಾಹ, ಕ್ರೌರ್ಯಕ್ಕೆ ಪ್ರಜೆಗಳ ಹೆಣಗಳು ತೋರಣದಂತೆ ಕಟ್ಟಲ್ಪಡುತ್ತಿವೆ. ಅಧಿಕಾರ ಹಪಾಹಪಿಗಳು ಸಾವಿನ ದಲ್ಲಾಳಿಗಳಾಗುತ್ತಿದ್ದಾರೆ. ಇಂಥವರೇ ತುಂಬಿರುವ ಜನ ವಿರೋಧಿ ಪ್ರಭುತ್ವ ಅಂತ್ಯ ಕಾಲ ಸಮೀಪಿಸಿದೆ ಎಂದು ಮಾರ್ಮಿಕವಾಗಿ ಹೇಳಿದ್ದಾರೆ.

   ಹೋರಾಟಗಾರರನ್ನು ಕಂಡೊಡನೇ ಗುಂಡಿಕ್ಕಲು ಆದೇಶಿಸುವ ಬಿ.ಎಸ್. ಯಡಿಯೂರಪ್ಪ ತಾವು ಹೋರಾಟಗ ಳಿಂದಲೇ ರಾಜಕೀಯದಲ್ಲಿ ಮೇಲೇರಿದವರು ಎಂಬುದನ್ನು ‘ಅನರ್ಹ ಅಧಿಕಾರ’ದ ಮದ ಮರೆಸಿದಂತಿದೆ. ಅವರ ಹೋರಾಟಗಳನ್ನು ಹಿಂದಿನ ಸರ್ಕಾರಗಳು ಬಂದೂಕು, ಗುಂಡುಗಳಿಂದ ಹತ್ತಿಕ್ಕಿದ್ದವೇ ? ಹೀಗಿದ್ದೂ, ಹೋರಾಟಗಳ ಮೇಲೆ ಯಡಿಯೂರಪ್ಪ ಅವರಿಗೆ ಏಕೆ ಇಷ್ಟು ದ್ವೇಷ? ಎಂದು ಕುಮಾರಸ್ವಾಮಿ ಪ್ರಶ್ನಿಸಿ ಟ್ವೀಟ್ ಮಾಡಿದ್ದಾರೆ.

     “ಫೈರ್ ಮಾಡಿದೆವು, ಒಂದು ಗುಂಡೂ ಬೀಳಲಿಲ್ಲ ಅಲ್ವಾ, ಒಬ್ಬರೂ ಸಾಯಲಿಲ್ವಲ್ಲ” ಇದು ಮಂಗಳೂರು ಪ್ರತಿಭಟನೆ ವೇಳೆ ಹೋರಾಟಗಾರರನ್ನು ಕೊಂದ ಪೊಲೀಸ್ ಅಧಿಕಾರಿಯೊಬ್ಬರ ಮಾತು. ಸರ್ಕಾರವೇ ಮುಂದೆ ನಿಂತು ಪ್ರತಿಭಟನಕಾರರನ್ನು ಕೊಂದಿದೆ ಎಂಬುದಕ್ಕೆ ಈ ವಿಡಿಯೋ ಸಾಕ್ಷಿಯಾಗಿ ನಿಂತಿದೆ. ಇದರ ಹೊಣೆಯನ್ನು ಮುಖ್ಯಮಂತ್ರಿ ಯಡಿಯೂರಪ್ಪರೇ ಹೊರಬೇಕು ಎಂದಿದ್ದಾರೆ.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap