ಉಪ ಚುನಾವಣೆಯಲ್ಲಿ ಜನರ ವಿಶ್ವಾಸ ಗಳಿಸಲು ಬಿಎಸ್‍ವೈ ಯತ್ನ

ಬೆಂಗಳೂರು

      ಸದ್ಯದಲ್ಲಿ ಎದುರಾಗಲಿರುವ ಉಪ ಚುನಾವಣೆಯಲ್ಲಿ ಜನರ ವಿಶ್ವಾಸ ಗಳಿಸಲು ಮುಖ್ಯಮಂತ್ರಿ ಯಡಿಯೂರಪ್ಪ ಉಪ ಚುನಾವಣೆ ನಡೆಯುವ ಕ್ಷೇತ್ರಗಳಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಜನಪರ ಯೋಜನೆಗಳಿಗೆ ಚಾಲನೆ ನೀಡಲು ಮುಂದಾಗಿದ್ದಾರೆ.

     ಬರುವ ನವೆಂಬರ್ 3 ರಿಂದ ಉಪ ಚುನಾವಣೆ ನಡೆಯುವ ಕ್ಷೇತ್ರಗಳಲ್ಲಿ ಪ್ರವಾಸಕೈಗೊಂಡು ಅಭಿವೃದ್ಧಿ ಕಾರ್ಯಗಳಿಗೆ ಶಿಲಾನ್ಯಾಸ ಕಾರ್ಯಕ್ರಮದ ಪ್ರವಾಸ ಆರಂಭವಾಗಲಿದೆ. ಬರುವ ಡಿ. 5 ರಂದು ನಡೆಯುವ 15 ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಜನರ ಮಾಡಲಿದ್ದಾರೆ.
ಮನ ಗೆಲ್ಲಲು ಮುಖ್ಯಮಂತ್ರಿ ಯಡಿಯೂರಪ್ಪ ಚುನಾವಣೆ ನಡೆಯುವ ಕ್ಷೇತ್ರಗಳಿಗೆ ಭರಪೂರ ಅನುದಾನ ನೀಡಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ.

     ಅನರ್ಹಗೊಂಡಿರುವ ಶಾಸಕರ ಕ್ಷೇತ್ರಗಳಲ್ಲಿ ಶತಾಯಗತಾಯ ಬಿಜೆಪಿ ಗೆಲುವಿಗೆ ತಮ್ಮದೇ ಆದ ರಣತಂತ್ರಗಳನ್ನು ರೂಪಿಸಿರುವ ಮುಖ್ಯಮಂತ್ರಿ ಯಡಿಯೂರಪ್ಪನವರು, ಈ ಕ್ಷೇತ್ರಗಳಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಕ್ಷೇತ್ರದ ಜನರ ಒಲವನ್ನು ಗಳಿಸಿ ಚುನಾವಣೆಯಲ್ಲಿ ಗೆಲ್ಲುವ ತಂತ್ರ ರೂಪಿಸಿದ್ದಾರೆ.

     ಉಪಚುನಾವಣೆ ನಡೆಯುವ ಕ್ಷೇತ್ರಗಳ ಕುಡಿಯುವ ನೀರು, ಕೆರೆ ತುಂಬುವ ಯೋಜನೆ ಸೇರಿದಂತೆ ಮೂಲಭೂತ ಸೌಕರ್ಯಗಳ ಕಾಮಗಾರಿಗಳಿಗೆ ಮುಖ್ಯಮಂತ್ರಿ ಯಡಿಯೂರಪ್ಪನವರು ಈಗಾಗಲೇ ದೊಡ್ಡ ಮೊತ್ತದ ಅನುದಾನವನ್ನು ಬಿಡುಗಡೆ ಮಾಡಿದ್ದಾರೆ. ಬಿಡುಗಡೆಯಾಗಿರುವ ಅನುದಾನದ ಕಾಮಗಾರಿಗಳಿಗೂ ಚುನಾವಣಾ ನೀತಿ ಸಂಹಿತೆ ಜಾರಿಯಾಗುವ ಮೊದಲೇ ಶಂಕುಸ್ಥಾಪನೆ ನೆರವೇರಿಸಲು ತೀರ್ಮಾನಿಸಿದ್ದಾರೆ. ನ. 3 ರಿಂದ ಉಪಚುನಾವಣೆ ನಡೆಯುವ ಕ್ಷೇತ್ರಗಳಲ್ಲಿ ಪ್ರವಾಸ ಕೈಗೊಳ್ಳುವ ಮುಖ್ಯಮಂತ್ರಿ ಯಡಿಯೂರಪ್ಪನವರು, ಮೊದಲಿಗೆ ನ. 3 ರಂದು ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡುವರು.

      ನಂತರ ನ. 4 ರಂದು ದೇವನಹಳ್ಳಿ, ನ. 7 ರಂದು ಹಿರೇಕೆರೂರು, 9 ಮತ್ತು 10ರಂದು ಹೊಸಪೇಟೆ (ವಿಜಯನಗರ) ಕ್ಷೇತ್ರಗಳಲ್ಲಿ ಪ್ರವಾಸ ನಡೆಸಿ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಶಂಕುಸ್ಥಾಪನೆ ನೆರವೇರಸಲಿದ್ದಾರೆ. ಉಪಚುನಾವಣೆಯ ಅಧಿಸೂಚನೆ ನ. 11 ರಂದು ಹೊರ ಬೀಳಲಿದ್ದು, ಅಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಯಾಗುವುದರಿಂದ ನ. 11ರ ಒಳಗೆ ಉಪಚುನಾವಣೆ ನಡೆಯುವ ಕ್ಷೇತ್ರಗಳಲ್ಲಿ ಒಂದು ಸುತ್ತಿನ ಪ್ರವಾಸ ಹಾಗೂ ಪ್ರಚಾರವನ್ನು ನಡೆಸಲು ಯೋಜನೆ ರೂಪಿಸಲಾಗಿದೆ.

 

Recent Articles

spot_img

Related Stories

Share via
Copy link
Powered by Social Snap