ದಾವಣಗೆರೆ:
ಲೋಕಸಭೆ ಚುನಾವಣೆ ಬಳಿಕ ಯಡಿಯೂರಪ್ಪ ಬಿಜೆಪಿ ರಾಜ್ಯಾಧ್ಯಕ್ಷರ ಸ್ಥಾನ ಕಳೆದುಕೊಂಡು ಮನೆ ಸೇರಲಿದ್ದಾರೆಂದು ಶಾಸಕ ಡಾ.ಶಾಮನೂರು ಶಿವಶಂಕರಪ್ಪ ತಿಳಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಎಚ್.ಬಿ.ಮಂಜಪ್ಪನವರ ನಾಮಪತ್ರ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಶಾಮನೂರು ಶಿವಶಂಕರಪ್ಪ, ಫಲಿತಾಂಶ ಹೊರ ಬೀಳುತ್ತಿದ್ದಂತೆಯೇ ಯಡಿಯೂರಪ್ಪ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಕಳೆದುಕೊಂಡು ಮನೆಗೆ ವಾಪಾಸ್ಸು ಹೋಗುತ್ತಾನೆ ಎಂದು ಹೇಳಿದರು.
ಕಳೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯವರು ಚಾಯ್ ವಾಲಾಗೆ ಅಂತಾ ನಿಲ್ಲಿಸಿದ್ದರು. ಹಾಗೆಯೇ ನಾವೂ ಈ ಸಲ ದಾವಣಗೆರೆ ಕ್ಷೇತ್ರಕ್ಕೆ ಸಾಮಾನ್ಯ ಕುಟುಂಬದಿಂದ ಬಂದ ವ್ಯಕ್ತಿಯನ್ನು ನಿಲ್ಲಿಸಿದ್ದೇವೆ. ಈ ಬಾರಿ ಕಾಂಗ್ರೆಸ್ಸಿನ ಗೆಲುವು ಶತಃ ಸಿದ್ಧವಾಗಿದೆ. ದಾವಣಗೆರೆ ಮತದಾರರು ಕಾಂಗ್ರೆಸ್ಸಿನ ಅಭ್ಯರ್ಥಿಗೆ ಅತೀ ಹೆಚ್ಚು ಮತ ನೀಡುವ ಮೂಲಕ ಗೆಲ್ಲಿಸಲಿದ್ದಾರೆಂದು ವಿಶ್ವಾಸ ವ್ಯಕ್ತಪಡಿಸಿದರು.