ಬಿಎಂಟಿಸಿಯಿಂದ ಸಚಿವಾಲಯದ ಸಿಬ್ಬಂದಿಗಳಿಗೆ ಬಸ್ ಸೌಲಭ್ಯ ..!

ಬೆಂಗಳೂರು:

    ಕೆಎಸ್‌ಆರ್‌ಟಿಸಿ ಬಸ್‌ ಲಾಕ್‌ಡೌನ್‌ನಿಂದಾಗಿ ಅಲ್ಲಲ್ಲಿ ಉಳಿದಿರುವ ಕಾರ್ಮಿಕರನ್ನು ಅವರವರ ಊರುಗಳಿಗೆ ತಲುಪಿಸುವ ಕೆಲಸದಲ್ಲಿ ನಿರತವಾಗಿದ್ದರೆ ಇತ್ತ ಬಿಎಂಟಿಸಿ ಬಸ್‌ಗಳು ಕರ್ನಾಟಕ ಸಚಿವಾಲಯದ ನೌಕರರನ್ನು ಸರ್ಕಾರಿ ಕಚೇರಿಗಳಿಗೆ ತಲುಪಿಸುವ ಕಾರ್ಯ ಆರಂಭಿಸಿದೆ

   ಎರಡನೇ ಹಂತದ ಲಾಕ್‌ಡೌನ್ ಮುಗಿಯುತ್ತಿದ್ದಂತೆ ಎಲ್ಲಾ ಸರ್ಕಾರಿ ಕಚೇರಿಗಳು ಕಾರ್ಯಾರಂಭ ಮಾಡಿವೆ.ಆದ್ದರಿಂದ ನಗರದ ವಿವಿಧ ಭಾಗಗಳಲ್ಲಿರುವ ಸರ್ಕಾರಿ ನೌಕರರು,ಸಿಬ್ಬಂದಿಯನ್ನು ಅವರ ಕಚೇರಿಗೆ ತಲುಪಿಸಲು ಬಿಎಂಟಿಸಿ ಸಾರಿಗೆ ಸೌಲಭ್ಯ ಕಲ್ಪಿಸಿದೆ

   ಪೂರ್ವ ವಲಯ, ಪಶ್ಚಿಮ ವಲಯ, ಉತ್ತರ ವಲಯ, ದಕ್ಷಿಣ ವಲಯ ಮತ್ತು ಈಶಾನ್ಯ ವಲಯ ಮುಂತಾದ ಪ್ರದೇಶ ಗಳಿಂದ ವಿಧಾನಸೌಧಕ್ಕೆ ಬಿಎಂಟಿಸಿ ಬಸ್ ಸೌಲಭ್ಯ ಕಲ್ಪಿಸಲಾಗಿದೆ. ಇದರಿಂದ ವಿಧಾನಸೌಧ, ವಿಕಾಸಸೌಧ ಮತ್ತು ಬಹುಮಹಡಿ ಕಟ್ಟಡಗಳಲ್ಲಿರುವ ಸರ್ಕಾರಿ ಕಚೇರಿಗಳಿಗೆ ಬರುವ ನೌಕರರು ಮತ್ತು ಸಿಬ್ಬಂದಿಗೆ ಅನುಕೂಲವಾಗಲಿದೆ.

   ಈ ಬಸ್‌ಗಳಲ್ಲಿ ಸಚಿವಾಲಯದಲ್ಲಿ ಕರ್ತವ್ಯ ನಿರ್ವಹಿಸುವ ಅಧಿಕಾರಿಗಳು, ಸಿಬ್ಬಂದಿಗಳನ್ನು ಹೊರತುಪಡಿಸಿ ಬೇರೆ ಸಾರ್ವಜನಿಕರಿಗೆ ಪ್ರಯಾಣಿಸಲು ಅವಕಾಶವಿಲ್ಲ.ಈ ವಾಹನಗಳಲ್ಲಿ ಪ್ರಯಾಣಿಸುವ ಸಿಬ್ಬಂದಿ ಮುಖಗವಸು ಧರಿಸಬೇಕು ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಕಡ್ಡಾಯಗೊಳಿಸಲಾಗಿದೆ. ಪ್ರತಿ ಬಸ್ಸಿನಲ್ಲಿ ಗರಿಷ್ಠ 20 ಪ್ರಯಾಣಿಕರಿಗೆ ಮಾತ್ರ ಅವಕಾಶವಿರುತ್ತದೆ. ಮಾರ್ಗಗಳಲ್ಲಿ ಮಾರ್ಗಫಲಕಗಳನ್ನು ಕಡ್ಡಾಯವಾಗಿ ಪ್ರದರ್ಶಿಸುವಂತೆ ಸೂಚಿಸಲಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap