ತುಮಕೂರು
ಶಿಕ್ಷಣವೆಂಬುದು ಸರ್ವರಿಗೂ ಸಿಗಬೆಕಾಗಿರುವ ಅಮೂಲ್ಯ ಸಂಪತ್ತು ಎಂಬ ಶ್ರೇಷ್ಠ ಕಲ್ಪನೆ ನಮ್ಮದು.ಜಾತಿ, ಮತ, ಬಡವ ಮತ್ತು ಶ್ರಿಮಂತನೆನ್ನದೆ ಎಲ್ಲರಿಗೂ ಸಿಗುವಂತೆ ಮಾಡುವ ಹೊಣೆಗಾರಿಕೆ ಸರ್ಕಾರಗಳದ್ದು, ಆದರೆ 2018-19ನೇ ಸಾಲಿನ ಬಜೆಟ್‍ನಲ್ಲಿರಾಜ್ಯ ಸರ್ಕಾರ ಎಸ್.ಸಿ/ಎಸ್.ಟಿ. ಸೇರಿದಂತೆ, ರಾಜ್ಯದಎಲ್ಲಾ ವರ್ಗದ ವಿದ್ಯಾರ್ಥಿಗಳಿಗೆ ಉಚಿತ ಬಸ್‍ಪಾಸ್ ನೀಡುವುದಾಗಿಘೋಷಣೆ ಮಾಡಿತ್ತು.
ಆದರೆ ಇವತ್ತಿನ ವರೆಗೂ ಆ ಯೋಜನೆಜಾರಿಗೆ ಬಾರದಿರುವುದುರಾಜ್ಯ ಸರ್ಕಾರದ ವಿದ್ಯಾರ್ಥಿಗಳ ಮೇಲಿನ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ . ರಾಜ್ಯವು ಬರಗಾಲದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರಾಜ್ಯದರೈತಾಪಿ ಕುಟುಂಬಗಳು ಸಂಕಷ್ಟದಲ್ಲಿವೆ. ಇಂದಿನ ಖಾಸಗಿ ಕಾಲೇಜುಗಳ ಡೋನೆಷನ್ ಹಾವಳಿ ಮತ್ತು ಶಿಕ್ಷಣವು ಮಾರಾಟದ ವಸ್ತುವಾಗಿರುವಂತಹ ಈ ಪರಿಸ್ಥಿತಿಯಲ್ಲಿ ರಾಜ್ಯದ ಹಿಂದುಳಿದ, ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಿದ್ದಾರೆ.ಇಂತಹ ದಿನಗಳಲ್ಲಿ ಹೆಚ್ಚಾಗಿ ಬಸ್ ಪಾಸ್ ಪಡೆಯುತ್ತಿರುವ ವಿದ್ಯಾರ್ಥಿಗಳು ಗ್ರಾಮಿಣ ಪ್ರದೇಶದವರೇಆಗಿದ್ದು, ರಾಜ್ಯದಲ್ಲಿನಎಲ್ಲಾ ವರ್ಗದ, ಎಲ್ಲಾ ಸ್ತರದ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಬೇಕೆಂದು ಅಭಾವಿಪ ಆಗ್ರಹಿಸುತ್ತದೆ.
ಹಳ್ಳಿಗಳಿಂದ ತಾಲ್ಲೂಕು-ಪಟ್ಟಣಗಳಿಗೆ ಶಿಕ್ಷಣ ಪಡೆಯಲು ಹೋಗುವ ವಿದ್ಯಾರ್ಥಿಗಳಿಗೆ ಉಚಿತ ಬಸ್‍ಪಾಸ್ ವಿತರಿಸುವುದರಿಂದ ಶಿಕ್ಷಣಕ್ಕೆ ಇನ್ನಷ್ಟು ಪ್ರೋತ್ಸಾಹ ನೀಡಿದಂತಾಗುತ್ತದೆ.ಕಳೆದ ವರ್ಷವು ಹಣವಿಲ್ಲವೆಂಬ ನೆಪವೊಡ್ಡಿದಕರ್ನಾಟಕರಾಜ್ಯ ಸರ್ಕಾರ ಈ ವರ್ಷವುಕೂಡ ವಿದ್ಯಾರ್ಥಿಗಳ ಬೇಡಿಕೆಯನ್ನು ಮೂಲೆಗುಂಪು ಮಾಡಿದೆ.ಕೇವಲ ಅಧಿಕಾರ ಉಳಿಸಿಕೊಳ್ಳುವ ಯೋಜನೆಯಲ್ಲಿರುವರಾಜ್ಯ ಸರ್ಕಾರಕ್ಕೆ ವಿದ್ಯಾರ್ಥಿಗಳ ಕೂಗು ಕೇಳಿಸಬೇಕು.ಹಾಗೂ ರಾಜ್ಯದ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಬಸ್‍ಪಾಸ್ ವ್ಯವಸ್ಥೆಯನ್ನು ಜಾರಿಗೆ ತರಬೇಕೆಂದು ಎಬಿವಿಪಿ ಆಗ್ರಹಿಸುತ್ತದೆ.
ಕೆ.ಎಸ್.ಆರ್.ಟಿ.ಸಿ ಇಲಾಖೆಯು ನೀಡಲಾಗುವ ವಿದ್ಯಾರ್ಥಿಗಳ ಬಸ್‍ಪಾಸ್ ವಿತರಣೆಯಲ್ಲಿ ವಿಳಂಬವಾಗುತ್ತಿದ್ದುಇದರಿಂದ ಪ್ರತಿನಿತ್ಯ ವಿದ್ಯಾರ್ಥಿಗಳಿಗೆ ಸಮಸ್ಯೆಆಗುತ್ತಿದ್ದು.ಗ್ರಾಮಾಂತರ ಪ್ರದೇಶದಿಂದ ಸಾವಿರಾರು ವಿದ್ಯಾರ್ಥಿಗಳು ಶಾಲಾಕಾಲೇಜುಗಳಿಗೆ ಬರುತ್ತಾರೆ . ಹತ್ತಿರ ಇದ್ದವರು ತಮ್ಮ ವಾಹನಗಳನ್ನು ಬಳಸಿದರೆ ದೂರದಿಂದ ಬರುವವರಿಗೆ ಸರ್ಕಾರಿ ಬಸ್‍ಗಳೇ ಆಸರೆಯಾಗಿದೆ.ಹಾಗೂ ಹೀಗಾಗಲೇ ಅರ್ಜಿಗಳನ್ನು ಸಲ್ಲಿಸಿ 10ದಿನಗಳು ಕಳೆದಿದ್ದು ಇಲ್ಲಿಯವರೆಗೂ ಬಸ್‍ಪಾಸ್ ವಿತರಣೆಯಾಗಿಲ್ಲ. ಹಲವಾರು ವಿದ್ಯಾರ್ಥಿಗಳಿಗೆ ಬಸ್‍ಪಾಸಿನ ತೊಂದರೆಯಾಗುತ್ತಿದೆ.ಆದ್ದರಿಂದ ಅಧಿಕಾರಿಗಳು ಗಮನ ಹರಿಸಿ ಎಲ್ಲಾ ಶಾಲಾಕಾಲೇಜಿನ ವಿದ್ಯಾರ್ಥಿಗಳಿಗೆ ಬೇಗನೆ ಬಸ್‍ಪಾಸ್ ವಿತರಣೆ ಮಾಡಬೇಕುಎಂದು ಎಬಿವಿಪಿ ಆಗ್ರಹಿಸುತ್ತದೆ.ಈ ಹೋರಾಟದಲ್ಲಿಜಿಲ್ಲಾ ಸಂಘಟನಾ ಕಾರ್ಯದರ್ಶಿ ಅಪ್ಪು ಪಾಟೀಲ್, ನಗರ ಕಾರ್ಯದರ್ಶಿ ನಂದೀಶ್, ತು.ವಿ.ವಿ.ಶಾಖೆಯ ಕಾರ್ಯದರ್ಶಿ ರಾಧಕೃಷ್ಣ, ಜಗದೀಶ್, ಸಿದ್ದೇಶ್, ನರಸಿಂಹ, ಸಂದೀಪ, ಸುನೀಲ್ ಹಾಗೂ ಸಾವಿರಾರು ವಿದ್ಯಾರ್ಥಿಗಳು ಭಾಗವಹಿಸಿ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
