ಕರ್ನಾಟಕ ಬಂದ್ : ಬಸ್ ಸಂಚಾರ ಎಂದಿನಂತೆ : ಸವದಿ

ಬೆಂಗಳೂರು:

       ಕೆಲವು ಸಂಘಟನೆಗಳು ನಾಳೆ(ಸೋಮವಾರ)ಬಂದ್ ಗೆ ಕರೆ ಕೊಟ್ಟಿರುವುದ ರಿಂದ ರಾಜ್ಯದ್ಯಂತ ಸಾರಿಗೆ ಸಂಚಾರ ವ್ಯವಸ್ಥೆ ಸುಗಮವಾಗಿ ಸಾಗುವಂತಾಗಲು ಸಕಲ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.

     ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗಳ ವ್ಯಾಪ್ತಿಗಳಲ್ಲಿ ಎಂದಿನಂತೆ ಬಸ್ ಸಂಚಾರ ಮುಂದುವರೆಯಲಿದೆ. ಜನತೆಗೆ ಈ ಬಗ್ಗೆ ಯಾವುದೇ ಆತಂಕ ಬೇಡ ಎಂದು ಲಕ್ಷ್ಮಣ ಸವದಿ ಅವರು ತಿಳಿಸಿದ್ದಾರೆ.

    ಬೆಂಗಳೂರಿನಲ್ಲಿ ಈ ಬಗ್ಗೆ ಸ್ಪಷ್ಟನೆ ನೀಡಿದ ಅವರು, ಬಂದ್ ಹಿನ್ನೆಲೆಯಲ್ಲಿ ಬಸ್ಸುಗಳಿಗೆ ಮತ್ತು ಇತರ ಸರ್ಕಾರಿ ಆಸ್ತಿಪಾಸ್ತಿಗಳಿಗೆ ಯಾವುದೇ ರೀತಿಯ ಧಕ್ಕೆ ಉಂಟಾಗದಂತೆ ಹೆಚ್ಚಿನ ಸುರಕ್ಷತಾ ವ್ಯವಸ್ಥೆಗಳನ್ನು ಒದಗಿಸಿಕೊಡ ಬೇಕೆಂದು ಈಗಾಗಲೇ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿ ಸೂಚನೆ ಕೊಡಲಾಗಿದೆ. 
 
    ಅಷ್ಟೇ ಅಲ್ಲ ಬಸ್ಸುಗಳಿಗೆ, ಸಾರ್ವಜನಿಕ ಆಸ್ತಿ ಪಾಸ್ತಿಗಳಿಗೆ ಹಾನಿ ಉಂಟು ಮಾಡಲು ಯಾರೇ ಯತ್ನಿಸಿದರೂ ಕೂಡ ಅವರ ವಿರುದ್ಧ ಅತ್ಯಂತ ಕಠಿಣ ಕ್ರಮ ಕೈಗೊಳ್ಳಲು ನಮ್ಮ ಸರ್ಕಾರ ಹಿಂಜರಿಯುವುದಿಲ್ಲವೆಂದು ಅವರು ಎಚ್ಚರಿಕೆ ನೀಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link