ಉಪಚುನಾವಣೆ ದಿನಾಂಕ ಪ್ರಕಟಿಸಿದ ಚುನಾವಣಾ ಆಯೋಗ..!

ಬೆಂಗಳೂರು:

   ಅನರ್ಹತೆ ಪ್ರಕರಣದ ಕುರಿತು ಸುಪ್ರೀಂಕೋರ್ಟ್​ ಆದೇಶದಂತೆ ಕರ್ನಾಟಕದ 15 ವಿಧಾನಸಭೆಗೆ ನಡೆಯಬೇಕಿದ್ದ ಉಪಚುನಾವಣೆ ದಿನಾಂಕವನ್ನು ತಡೆಹಿಡಿಯಲಾಗಿತ್ತು. ಇದೀಗ ಈ ಕ್ಷೇತ್ರಗಳ ಉಪಚುನಾವಣೆಗೆ ಚುನಾವಣಾ ಆಯೋಗ ಹೊಸ ದಿನಾಂಕವನ್ನು ನಿಗದಿ ಮಾಡಿ ಆಯೋಗ ಆದೇಶ ನೀಡಿದೆ.

   ಡಿಸೆಂಬರ್​ 5ರಂದು ಚುನಾವಣೆ  ನಡೆಯಲಿದ್ದು, ಡಿಸೆಂಬರ್ 9ರಂದು ಮತ ಎಣಿಕೆ ಕಾರ್ಯ ನಡೆಯಲಿದೆ ಎಂದು ಆಯೋಗ ತಿಳಿಸಿದೆ. ನ.11 ರಂದು ನಾಮಪತ್ರ ಸಲ್ಲಿಕೆ ಆರಂಭವಾಗಲಿದ್ದು ನ.​18ಕ್ಕೆ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ನವೆಂಬರ್ 19ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನವೆಂಬರ್ 21ರಂದು ನಾಮಪತ್ರ ಹಿಂಪಡೆದುಕೊಳ್ಳಲು ಕೊನೇ ದಿನವಾಗಿದೆ. ಒಟ್ಟಾರೆ ಡಿಸೆಂಬರ್​ 11ರೊಳಗೆ ಚುನಾವಣಾ ಪ್ರಕ್ರಿಯೆ ಸಂಪೂರ್ಣ ಮುಕ್ತಾಯಗೊಳ್ಳುತ್ತದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಯಾವ ಕ್ಷೇತ್ರಗಳಿಗೆ ಉಪಚುನಾವಣೆ

    ಅಥಣಿ,ಕಾಗವಾಡ,ಗೋಕಾಕ್​,ಯಲ್ಲಾಪುರ,ಹಿರೇಕೆರೂರು,ರಾಣೆಬೆನ್ನೂರು,ವಿಜಯನಗರ ,ಚಿಕ್ಕಬಳ್ಳಾಪುರ, ಕೆ.ಆರ್.ಪುರ, ಯಶವಂತಪುರ, ಮಹಾಲಕ್ಷ್ಮೀ ಲೇಔಟ್,ಶಿವಾಜಿನಗರ,ಹೊಸಕೋಟೆ,ಕೆ.ಆರ್​.ಪೇಟೆ,ಹುಣಸೂರು

   ಈ 15 ಕ್ಷೇತ್ರಗಳಿಗೆ ಅಕ್ಟೋಬರ್​ 23ರಂದು ಉಪಚುನಾವಣೆ ನಡೆಸುವುದಾಗಿ ಈ ಹಿಂದೆಯೇ ಆಯೋಗ ಘೋಷಿಸಿತ್ತು. ಆದರೆ, 15 ಕ್ಷೇತ್ರಗಳ ಶಾಸಕರ ಅನರ್ಹತೆ ಅರ್ಜಿ ಸುಪ್ರೀಂಕೋರ್ಟ್​ನಲ್ಲಿ ವಿಚಾರಣೆ ನಡೆಯುತ್ತಿದೆ. ಪ್ರಕರಣದ ಬಗ್ಗೆ ಕೂಲಂಕಷ ವಿಚಾರಣೆ ಆಗಬೇಕಿರುವುದರಿಂದ ಹಾಗೂ ಚುನಾವಣೆ ಮುಂದೂಡಿಕೆಗೆ ಆಯೋಗದ ಯಾವುದೇ ಅಭ್ಯಂತರ ಇಲ್ಲದಿದ್ದಾಗ ಸುಪ್ರೀಂಕೋರ್ಟ್​ ಚುನಾವಣೆಯನ್ನು ಮುಂದೂಡಿತ್ತು. ಅದರಂತೆ ಇದೀಗ ಆಯೋಗ ಉಪಚುನಾವಣೆಗೆ ಮತ್ತೊಮ್ಮೆ ಹೊಸ ದಿನಾಂಕವನ್ನು ಪ್ರಕಟಿಸಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link
Powered by Social Snap