ಕೆಎಸ್ಸಾರ್ಟಿಸಿ ಬಸ್ಸುನಿಲ್ದಾಣದಲ್ಲಿ ಸಿ-ವಿಜಿಲ್ ಸಹಾಯ ಕೇಂದ್ರ ಸ್ಥಾಪನೆ

ತುಮಕೂರು
 
        ಚುನಾವಣಾ ಅಕ್ರಮಗಳನ್ನು ತಡೆಗಟ್ಟಲು ಕೇಂದ್ರ ಚುನಾವಣಾ ಆಯೋಗ ಬಿಡುಗಡೆ ಮಾಡಿರುವ ಸಿ-ವಿಜಿಲ್ ಆ್ಯಪ್ ಬಳಕೆಯ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಲು ತುಮಕೂರು ನಗರದ ಕೆಎಸ್ಸಾರ್ಟಿಸಿ ಬಸ್ಸು ನಿಲ್ದಾಣದಲ್ಲಿ ಸಹಾಯ ಕೇಂದ್ರವನ್ನು ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ತೆರೆಯಲಾಗಿದೆ. 
         ಈ ಸಹಾಯ ಕೇಂದ್ರಕ್ಕೆ ಚಾಲನೆ ನೀಡಿ ಮಾತನಾಡಿದ ಸ್ವೀಪ್ ಸಮಿತಿ ಅಧ್ಯಕ್ಷೆ ಹಾಗೂ ಜಿಲ್ಲಾ ಪಂಚಾಯತಿ ಸಿಇಓ ಶುಭಾ ಕಲ್ಯಾಣ್ ಅವರು, ಚುನಾವಣಾ ಅಕ್ರಮಗಳು, ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಂತಹ ಪ್ರಕರಣಗಳು ನಡೆದಾಗ ಅವುಗಳನ್ನು ಚಿತ್ರೀಕರಿಸಿ ಪೋಟೋ/ವಿಡಿಯೋ ಈ ಆ್ಯಪ್ ಮೂಲಕ ಆಯೋಗಕ್ಕೆ ಸಲ್ಲಿಸಬಹುದು ಎಂದು ಅವರು ತಿಳಿಸಿದರು. 
        ಮೊಬೈಲ್‍ನ ಪ್ಲೇಸ್ಟೋರ್ ಮೂಲಕ ಈ ಆ್ಯಪನ್ನು ಡೌನ್‍ಲೋಡ್ ಮಾಡಕೊಂಡು ಬಳಕೆ ಮಾಡುವ ಬಗ್ಗೆ ಈ ಸಹಾಯ ಕೇಂದ್ರದಲ್ಲಿರುವ ಸಿಬ್ಬಂದಿ ಸಾರ್ವಜನಿಕರಿಗೆ ಸಹಾಯ ಮಾಡಲಿದ್ದಾರೆ.  ಈ ಸಹಾಯ ಕೇಂದ್ರ ಏಪ್ರಿಲ್ 16ರವರೆಗೂ  ಕಾರ್ಯನಿರ್ವಹಿಸಲಿದೆ ಎಂದರು. 
         
          ಹೆಚ್ಚಿನ ಸಂಖ್ಯೆಯಲ್ಲಿ ಮತದಾರರು ಈ ಆ್ಯಪನ್ನು ಡೌನ್‍ಲೋಡ್ ಮಾಡಿಕೊಂಡು ಮಾದರಿ ನೀತಿ ಸಂಹಿತೆಯ ಉಲ್ಲಂಘನೆ ಆಗುತ್ತಿರುವ ಪ್ರಕರಣಗಳನ್ನು ಚುನಾವಣಾ ಆಯೋಗಕ್ಕೆ ಕಳುಹಿಸಬೇಕು.  ಈ ಸೌಲಭ್ಯವನ್ನು ಸಾರ್ವಜನಿಕರು ಬಳಸಿಕೊಳ್ಳಬೇಕು ಎಂದು ಅವರು ಕರೆ ನೀಡಿದರು. 
 
         ಈ ಸಂದರ್ಭದಲ್ಲಿ ಜಿಲ್ಲಾ ನೋಂದಣಾಧಿಕಾರಿ ಶ್ರೀದೇವಿ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ರಾಜ್‍ಕುಮಾರ್, ವಾಸಂತಿ ಉಪ್ಪಾರ್, ಗಾಯಿತ್ರಿ ಶ್ರೀನಿವಾಸ್, ಮತ್ತಿತರರು ಹಾಜರಿದ್ದರು.
   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link