ಬೆಂಗಳೂರು:
ಕೊನೆಗೂ ಸಿಎಂ ಯಡಿಯೂರಪ್ಪ ಸಚಿವ ಸಂಪುಟ ವಿಸ್ತರಣೆಗೆ ದಿನಾಂಕ ಫಿಕ್ಸ್ ಆಗಿದೆ. ಈಗಾಗಲೇ ವಿಸ್ತರಣೆಗೆ ಅಮಿತ್ ಶಾ ಸೇರಿದಂತೆ ಪಕ್ಷದ ಹೈಕಮಾಂಡ್ ನಾಯಕರ ಅನುಮತಿ ಸಿಕ್ಕಿದ್ದು ಅದರಂತೆ ಗುರುವಾರ (ಫೆ.6)ಕ್ಕೆ ಸಚಿವ ಸಂಪುಟ ವಿಸ್ತರಣೆಗೊಳ್ಳುವುದು ಖಾತ್ರಿಯಾಗಿದೆ.
ಇಂದು ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಸಿಎಂ “ಫೆ.6, ಗುರುವಾರ ಸಚಿವ ಸಂಪುಟ ವಿಸ್ತರಣೆ ನೆರವೇರಲಿದೆ. ಅಂದು ಬೆಳಿಗ್ಗೆ 10.30ಕ್ಕೆ ನೂತನ ಸಚಿವರ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದೆ” ಎಂದಿದ್ದಾರೆ.ಇನ್ನು ಸಂಪುಟ ವಿಸ್ತರಣೆಯೆ ಅಥವಾ ಪುನರ್ರಚನೆಯೆ ಎಂಬುದನ್ನು ಸೋಮವಾರ ತೀರ್ಮಾನಿಸುವುದಾಗಿ ಹೇಳಿರುವ ಮುಖ್ಯಮಂತ್ರಿ ನೂತನ ಸಚಿವರಾಗಿ ಯಾರೆಲ್ಲ ಪ್ರಮಾಣವಚನ ಸ್ವೀಕರಿಸುತ್ತಾರೆ ಎನ್ನುವ ಗುಟ್ಟು ಬಿಟ್ಟುಕೊಟ್ಟಿಲ್ಲ.
ಏತನ್ಮಧ್ಯೆ ಬುಧವಾರ (ಫೆ.5) ಕಲಬುರಗಿಯಲ್ಲಿ ನಡೆಯುವ ಎಂಬತ್ತೈದನೇ ಅಖಿಲಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟನೆ ಕಾರ್ಯಕ್ರಮದಲ್ಲಿ ಸಿಎಂ ಯಡಿಯೂರಪ್ಪ ಭಾಗಿಯಾಗಲಿದ್ದಾರೆ.ಆದರೆ ಗುರುವಾರ ಅವರು ಬೆಂಗಳೂರಿನಲ್ಲೇ ಇರಲಿದ್ದಾರೆ ಎಂದು ತಿಳಿದುಬಂದಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
