ತಿಪಟೂರು :
ತಾಲೂಕಿನ ಹೊನ್ನವಳ್ಳಿ ಹೋಬಳಿಯ ಕಲ್ಕೆರೆ ಗ್ರಾಮದಲ್ಲಿ ಗ್ರಾಮದ ವಾಸಿ ಸುರೇಶ್ ಎಂಬುವವರಿಗೆ ಸೇರಿದ ಕರುವನ್ನು ಇಂದು ಸಂಜೆ 5 ಗಂಟೆ ಸಮಯದಲ್ಲಿ ಹೊಲದಲ್ಲಿ ಮೇಯುತ್ತಿದ್ದ ಕರು ಮೇಲೆ ಚಿರತೆ ದಾಳಿ ಮಾಡಿದೆ. ಕಳೆದ 15 ದಿನಗಳಿಂದ ಮಣಕೀಕೆರೆ, ಹೊಸಹಳ್ಳಿ, ಕಲ್ಕೆರೆ, ಮೀಸೇತಿಮ್ಮನಹಳ್ಳಿ ಭಾಗದಲ್ಲಿ ಚಿರತೆ ಹಾವಳಿ ಹೆಚ್ಚಾಗಿದ್ದು ಗ್ರಾಮಸ್ಥರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಅರಣ್ಯ ಇಲಾಖೆ ಇತ್ತ ಗಮನಹರಿಸಿ ಸೂಕ್ತ ಕ್ರಮಕೈಗೊಳ್ಳುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ