ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ

ಚಿತ್ರದುರ್ಗ;

         ನಗರದ ಕೆ.ಎಸ್.ಆರ್.ಟಿ.ಸಿ. ಬಸ್‍ನಿಲ್ದಾಣದಲ್ಲಿ ಎಸ್.ಜೆ.ಎಂ. ದಂತ ವೈದ್ಯಕೀಯ ಮಹಾವಿದ್ಯಾಲಯ, ರೋಟರಿ ಕ್ಲಬ್ ಚಿನ್ಮೂಲಾದ್ರಿ, ಯೂಥ್ ರೆಡ್ ಕ್ರಾಸ್ ಸೊಸೈಟಿ ಮತ್ತು ಭಾರತೀಯ ದಂತ ವೈದ್ಯಕೀಯ ಪರಿಷತ್, ಚಿತ್ರದುರ್ಗ ವಿಭಾಗ ಇವರುಗಳ ಸಹಯೋಗದಲ್ಲಿ ವಿಶ್ವ ಕ್ಯಾನ್ಸರ್ ದಿನಾಚರಣೆಯ ಅಂಗವಾಗಿ ಕ್ಯಾನ್ಸರ್ ಜಾಗೃತಿ ಹಾಗೂ ಉಚಿತ ಬಾಯಿಯ ಕ್ಯಾನ್ಸರ್ ತಪಾಸಣಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

          ಕಾರ್ಯಕ್ರಮದಲ್ಲಿ ತಂಬಾಕುವಿನಿಂದ ಆಗುವ ದುಷ್ಪರಿಣಾಮಗಳು ಮತ್ತು ಕ್ಯಾನ್ಸರ್‍ನ್ನು ತಡೆಗಟ್ಟುವುದು ಹೇಗೆ? ಎಂಬುವುದರ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಲಾಯಿತು. ಎಸ್.ಜೆ.ಎಂ ವಿದ್ಯಾಪೀಠದ ಕಾರ್ಯನಿರ್ವಾಹಣಾ ನಿರ್ದೇಶಕರು ಹಾಗೂ ರೋಟರಿ ಚಿನ್ಮೂಲಾದ್ರಿಯ ಅಧ್ಯಕ್ಷರಾದ ಡಾ.ಈ.ಚಿತ್ರಶೇಖರ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.

           ಎಸ್.ಜೆ.ಎಂ. ದಂತ ವೈದ್ಯಕೀಯ ಮಹಾವಿದ್ಯಾಲಯದ ಪ್ರಾಂಶುಪಾಲರು ಮತ್ತು ರೋಟರಿ ಕ್ಲಬ್ ಚಿನ್ಮೂಲಾದ್ರಿಯ ಕಾರ್ಯದರ್ಶಿಗಳಾದ ಡಾ.ಆರ್.ಗೌರಮ್ಮ ಅವರು ಕ್ಯಾನ್ಸರ್ ರೋಗದ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿ ಅದನ್ನು ತಡೆಗಟ್ಟುವ ಕುರಿತು ಅರಿವು ಮೂಡಿಸಿದರು. ಈ ಶಿಬಿರದಲ್ಲಿ ಸುಮಾರು 160 ಜನ ಸಾರ್ವಜನಿಕರಿಗೆ ಆರೋಗ್ಯ ತಪಾಸಣೆ ಮಾಡಲಾಯಿತು. ಅದರಲ್ಲಿ 3 ಜನರಿಗೆ ಕ್ಯಾನ್ಸರ್ ರೋಗದ ಲಕ್ಷಣಗಳು ಕಾಣಿಸಿದ್ದು ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕಳುಹಿಸಿಕೊಡಲಾಯಿತು.

            ಈ ಸಂದರ್ಭದಲ್ಲಿ ಎಸ್.ಜೆ.ಎಂ. ದಂತ ವೈದ್ಯಕೀಯ ಮಹಾವಿದ್ಯಾಲಯದ ವತಿಯಿಂದ ಡಾ. ನಾಗರಾಜಪ್ಪ, ಡಾ.ಜಯಚಂದ್ರ, ಡಾ.ವಿಶ್ವನಾಥ ಮತ್ತು ಐ.ಡಿ.ಎ. ಚಿತ್ರದುರ್ಗ ಬ್ರಾಂಚ್ ಕಾರ್ಯದರ್ಶಿಯಾದ ಡಾ.ಹರಿಣಿ.ಟಿ.ಸಿ. ಹಾಗೂ ಡಾ.ಆರ್.ದೀಪಾ, ರೆಡ್‍ಕ್ರಾಸ್ ಸೊಸೈಟಿ ಛೇರಮನ್ ಮಹೇಂದ್ರನಾಥ ಹಾಗೂ ರೋಟರಿ ಚಿನ್ಮೂಲಾದ್ರಿಯ ಬಸವರಾಜಪ್ಪ, ಚೆಲುವರಾಜ್, ನಾಗರಾಜ್ ಸಂಗಮ್ ಉಪಸ್ಥಿತರಿದ್ದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link