ಚಳ್ಳಕೆರೆ
ರಾಜ್ಯದಾದ್ಯಂತ ಪಿರಮಿಡ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ವಿವಿಧ ಲೋಕಸಭಾ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳು ಸ್ಪರ್ಧಿಸಿದ್ದು, ಕಳೆದ ಎರಡು ದಿನಗಳಿಂದ ಚಳ್ಳಕೆರೆ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪ್ರಚಾರ ಕಾರ್ಯ ನಡೆಯುತ್ತಿದ್ದು, ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಗೆಲುವು ಸಾಧಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತಿದೆ ಎಂದು ಅಭ್ಯರ್ಥಿ ಬಳ್ಳಾರಿಯ ವೈ.ಅರುಣಾಚಲಂ ತಿಳಿಸಿದರು.
ಅವರು, ಭಾನುವಾರ ಚಳ್ಳಕೆರೆ ನಗರದ ಹಳೇಟೌನ್ ಹಾಗೂ ಇನ್ನಿತರೆ ಕಡೆಗಳಲ್ಲಿ ಮನೆ ಮನೆಗೂ ತೆರಳಿ ಮತದಾರರನ್ನು ಭೇಟಿ ಮಾಡಿ ಪಕ್ಷಕ್ಕೆ ಮತಯಾಚಿಸುವುದಾಗಿ ತಿಳಿಸಿದರು. ಈಗಾಗಲೇ ಚಿತ್ರದುರ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಮೊಳಕಾಲ್ಮೂರು, ಚಳ್ಳಕೆರೆ, ಚಿತ್ರದುರ್ಗ ಕೆಲವು ಪ್ರದೇಶಗಳಲ್ಲಿ ಪ್ರಚಾರ ಕಾರ್ಯ ಆರಂಬಿಸಿದ್ದೇನೆ.
ವಿಶೇಷವಾಗಿ ಚಳ್ಳಕೆರೆ ಕ್ಷೇತ್ರ ನನಗೆ ಹೆಚ್ಚು ಮತಗಳನ್ನು ತಂದುಕೊಡುವ ಕ್ಷೇತ್ರವಾಗಿದೆ. ಕಳೆದ ಸುಮಾರು 20 ವರ್ಷಗಳಿಂದ ಚಳ್ಳಕೆರೆ ನಗರದಲ್ಲಿ ಪಿರಮಿಡ್ ಪಾರ್ಟಿ ಆಫ್ ಇಂಡಿಯಾ ಕಾರ್ಯನಿರ್ವಹಿಸುತ್ತಿದ್ದು, ಇನ್ನು ಒಂದೆರಡು ದಿನಗಳಲ್ಲಿ ಇನ್ನಷ್ಟು ವ್ಯಾಪಕ ಪ್ರಚಾರ ಕೈಗೊಳ್ಳುವ ಉದ್ದೇಶ ಹೊಂದಿರುವಾಗಿ ಅವರು ತಿಳಿಸಿದರು.
ಪಿರಮಿಡ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ನಾನು ಕಳೆದ 2013ರಲ್ಲಿ ಬಳ್ಳಾರಿ ನಗರ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿದ್ದೆ. ಆ ಸಂದರ್ಭದಲ್ಲಿ ಸೋಲು ಅನುಭವಿಸಬೇಕಾಯಿತು. ಆದರೂ ಸಹ ಪಿರಮಿಡ್ ಪಾರ್ಟಿ ಆಫ್ ಇಂಡಿಯಾ ದುರೀಣರ ಸೂಚನೆಯಂತೆ ನಾಮಪತ್ರ ಸಲ್ಲಿಸಿದ್ದೇನೆ. ನನ್ನೊಂದಿಗೆ ಪ್ರತಿನಿತ್ಯ ವಿವಿಧ ಜಿಲ್ಲೆಗಳ ಪ್ರತಿನಿಧಿಗಳು ಪ್ರಚಾರ ಕಾರ್ಯದಲ್ಲಿ ಸಹಕಾರ ನೀಡಿತ್ತಿದ್ಧಾರೆ ಎಂದರು. ಈ ಸಂದರ್ಭದಲ್ಲಿ ಬೋರಯ್ಯ, ನಾಗರಾಜು ಮುಂತಾದವರು ಪ್ರಚಾರ ಕಾರ್ಯದಲ್ಲಿ ಸಹಕರಿಸುತ್ತಿದ್ದಾರೆ ಎಂದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
