ದಾವಣಗೆರೆ:
ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಹೊತ್ತಿ ಉರಿದಿದ್ದು, ಅದೃಷ್ಟವಶಾತ್ ದಂಪತಿಗಳು ಪಾರಾಗಿರುವ ಘಟನೆ ತಾಲೂಕಿನ ಆನಗೋಡು ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ನಡೆದಿದೆ.
ಬೆಂಗಳೂರಿನ ವೈಟ್ ಫೀಲ್ಡ್ ಮೂಲದ ಆನಂದ್ ಎಂಬುವರಿಗೆ ಸೇರಿದ ಕಾರು ಎನ್ನಲಾಗಿದ್ದು, ಶುಕ್ರವಾರ ಬೆಳಗ್ಗೆ 6 ಗಂಟೆ ಸುಮಾರಿಗೆ ಘಟನೆ ಜರುಗಿದೆ ಎನ್ನಲಾಗಿದ್ದು, ಆನಂದ್ ಹಾಗೂ ಅವರ ಪತ್ನಿ ಬೆಂಗಳೂರಿನಿಂದ ದಾವಣಗೆರೆ ಮಾರ್ಗವಾಗಿ ಗೋವಾಗೆ ತೆರಳುತ್ತಿದ್ದರು, ಈ ವೇಳೆ ಆನಗೋಡು ಬಳಿ ಇಂಡಿಕಾ ಕಾರ್ ಡಿವೈಡರ್ ಗೆ ಡಿಕ್ಕಿಯಾಗಿದೆ. ಡಿಕ್ಕಿಯಾದ ರಭಸಕ್ಕೆ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದೆ.
ದಂಪತಿಗಳಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಸ್ಥಳಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ. ಇನ್ನೂ ಸ್ಥಳಕ್ಕೆ ಅಗ್ನಿ ಶಾಮಕ ದಳದ ಸಿಬ್ಬಂದಿ ಭೇಟಿ ನೀಡಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದು.ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ