ಚಿಕ್ಕಬಳ್ಳಾಪುರ
ಚಾಲಕನ ನಿಯಂತ್ರಣ ತಪ್ಪಿದ ಕಾರು ಮುಂದೆ ಹೋಗುತ್ತಿದ್ದ ಎರಡು ಬೈಕ್‍ಗಳಿಗೆ ಡಿಕ್ಕಿ ಹೊಡೆದು ಬೈಕ್ ಮೇಲೆ ಕಾರು ಹಿರಿದ ಘಟನೆ ಜಿಲ್ಲೆಯ ಶಿಡ್ಲಘಟ್ಟದ ಜೆ ವೆಂಕಟಾಪುರದಲ್ಲಿ ನಡೆದಿದೆ.
ನಿಯಂತ್ರಣ ತಪ್ಪಿದ ಕಾರು ಕೋಲಾರದ ಕಡೆಯಿಂದ ಬರುತ್ತಿದ್ದ ವೇಳೆ ವೆಂಕಟಾಪುರ ಗ್ರಾಮದಲ್ಲಿ ಬೈಕ್‍ಗಳನ್ನು ಓವರ್ ಟೇಕ್ ಮಾಡುವ ಭರದಲ್ಲಿ ಬೈಕ್‍ಗಳಿಗೆ ಡಿಕ್ಕಿ ಹೊಡೆದು ಬೈಕ್ ಮೇಲೆ ಕಾರು ಹರಿದಿದ್ದು ಘಟನೆಯಲ್ಲಿ ಬೈಕ್ ಸವಾರರು ತೀವ್ರವಾಗಿ ಗಾಯಗೊಂಡಿದ್ದಾರೆ ಅವರನ್ನು ಸ್ಥಳಿಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಪಘಾತದಲ್ಲಿ ಬೈಕ್ ಮೇಲೆ ಕಾರು ಹರಿದ ಪರಿಣಾಮ ಬೈಕ್ ನಲ್ಲಿದ್ದ ಇಬ್ಬರು ಸವಾರರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆಯಲ್ಲಿ ಮತ್ತೋರ್ವ ಬೈಕ್ ಸವಾರ ಸಣ್ಣ-ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
