ದಾವಣಗೆರೆಗೆ
ಸಮೀಪದ ಬೇತೂರು ಗ್ರಾಮದ ಬಳಿ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರು ಚಾಲಕ ಸಿದ್ದೇಶ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ದಾವಣಗೆರೆಯಿಂದ ಜಗಳೂರು ಕಡೆಗೆ ಕಾರು ಹೋಗುತ್ತಿತ್ತು. ಆದರೆ, ಶನಿವಾರ ನಸುಕಿನಲ್ಲಿ ಚಾಲಕನ ನಿಯಂತ್ರ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ, ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಘಟನೆಯಲ್ಲಿ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ಇನ್ನುಳಿದಂತರ ಕಾರಿನಲ್ಲಿದ್ದ ಮೂವರಿಗೆ ಸಣ್ಣ ಗಾಯಗಳಾಗಿದ್ದು, ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಈ ಕುರಿತು ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
