ಬೆಂಗಳೂರು
ನಾವು ಸೇವಿಸುವ ಆಹಾರದಲ್ಲಿ ಪೌಷ್ಟಿಕಾಂಶ ಕೊರತೆ ಇರುವುದರಿಂದ ಸಾಂಕ್ರಾಮಿಕ ರೋಗಗಳು ಹೆಚ್ಚಾಗುತ್ತಿರುವುದನ್ನು ಗಂಭೀರವಾಗಿ ಚಿಂತಿಸಿ ಮಕ್ಕಳ ಆಹಾರ ಪರಿಸ್ಥಿತಿಯ ಬಗ್ಗೆ ಗಮನ ನೀಡಬೇಕು ಎಂದು ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಅವರು ತಿಳಿಸಿದರು.
ನಗರದ ಗವೀಪುರಂ ನಲ್ಲಿ ಅದಮ್ಯ ಚೇತನ ಸಂಸ್ಥೆಯ ಶೂನ್ಯ ತ್ಯಾಜ್ಯ ಅಡುಗೆ ಮನೆಗೆ ಮಂಗಳವಾರ ಭೇಟಿ ನೀಡಿ ನಂತರ ನಡೆದ ಸಮಾರಂಭವನ್ನುದ್ದೇಶಿಸಿ ಮಾತನಾಡಿದ ಅವರು, ದೇಶದ ಶೇಕಡ 38.7ರಷ್ಟು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ. ಇದೊಂದು ಗಂಭೀರ ಸಮಸ್ಯೆ ಆಗಿದೆ. ಇದರಿಂದ ಸಾಂಕ್ರಾಮಿಕವಲ್ಲದ ರೋಗಗಳು ಹೆಚ್ಚಾಗುತ್ತಿವೆ ಎಂದರು.
ನಾವು ತಿನ್ನುತ್ತಿರುವ ಆಹಾರದಲ್ಲಿ ಅಪೌಷ್ಟಿಕತೆ ಕೊರತೆ ಇದೆ.ಇದರ ಬಗ್ಗೆ ನಾವು ಗಂಭೀರವಾಗಿ ಚಿಂತಿಸಬೇಕಾಗಿದೆ. ಮಕ್ಕಳ ಆಹಾರದ ಬಗ್ಗೆ ಹೆಚ್ಚಿನ ಗಮನ ನೀಡಬೇಕು ಎಂದ ಅವರು, ಅದಮ್ಯ ಚೇತನ ಸಂಸ್ಥೆ ಯಾವುದೇ ಲಾಭದ ಆಸೆ ಇಲ್ಲದೆ ನೀಡುತ್ತಿರುವ ಸೇವೆ ಶ್ಲಾಘನೀಯ. ಶೂನ್ಯ ತ್ಯಾಜ್ಯ ಅಡುಗೆ ಮನೆ ಮಾಡಿರುವುದು ಸಣ್ಣ ಸಾಧನೆಯಲ್ಲ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಅಗತ್ಯವಿರುವ ಮಕ್ಕಳಿಗೆ ಆಹಾರ ನೀಡುತ್ತಿರುವ ಅದಮ್ಯ ಚೇತನಕ್ಕೆ ಭೇಟಿ ನೀಡುತ್ತಿರುವುದು ಸಂತಸ ತಂದಿದೆ. ದೆಹಲಿಗೆ ಹೋದಾಗ ದಿವಂಗತ ಅನಂತ್ ಕುಮಾರ್ ಅವರ ಮನೆಯಲ್ಲಿ ಉಳಿದುಕೊಳ್ಳುತ್ತಿದ್ದೆ. ಅಲ್ಲಿ ಹಲವಾರು ಸವಿಯಾದ ಸಿಹಿ ತಿಂಡಿಗಳನ್ನು ಸವಿದಿದ್ದೇನೆ ಎಂದು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ತಮ್ಮ ಹಳೆಯ ನೆನಪುಗಳನ್ನು ಮೆಲುಕು ಹಾಕಿಕೊಂಡರು.
ಅದಮ್ಯ ಚೇತನಕ್ಕೆ ಭೇಟಿ ನೀಡುತ್ತಿರುವುದು ಸಂತಸ ತಂದಿದೆ. ನಾನು ದೆಹಲಿಗೆ ಹೋದಾಗ ಅನಂತಕುಮಾರ್ ಅವರ ಮನೆಯಲ್ಲಿ ಉಳಿದುಕೊಳ್ಳುತ್ತಿದ್ದೆ. ಅಲ್ಲಿ ನಾನು ಹಲವಾರು ಸವಿಯಾದ ಸಿಹಿ ತಿಂಡಿಗಳನ್ನು ಸವಿದಿದ್ದೇನೆ. ನಮ್ಮ ಮನೆಗೆ ಬಂದಾಗ ಆಂಧ್ರ ಊಟವನ್ನು ಬಹಳ ಇಷ್ಟಪಟ್ಟು ಅನಂತಕುಮಾರ್ ಸವಿಯುತ್ತಿದ್ದರು. ಇಲ್ಲಿ ಭೇಟಿ ನೀಡಿದಾಗ ನನಗೆ ಇಲ್ಲಿನ ಕೆಲಸಗಾರರ ಶ್ರದ್ಧೆ ಬಹಳ ಇಷ್ಟ ಆಯಿತು. ಶ್ರದ್ಧೆಯಿಂದ ತಯಾರಿಸುವ ಆಹಾರದ ಖುಷಿಯನ್ನು ಇಲ್ಲಿ ಕಂಡಿದ್ದೇನೆ. ಶೇ.38.7ರಷ್ಟು ಮಕ್ಕಳು ಇನ್ನೂ ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ. ನಾವು ತಿನ್ನುತ್ತಿರುವ ಆಹಾರದಲ್ಲಿ ಪೌಷ್ಠಿಕಾಂಶದ ಕೊರತೆ ಇದೆ ಎಂದರು.ಮಕ್ಕಳ ಆಹಾರ ಪರಿಸ್ಥಿತಿಯ ಬಗ್ಗೆ ಗಮನ ನೀಡಬೇಕು. ಮಕ್ಕಳ ಆಹಾರದ ಬಗ್ಗೆ ಹೆಚ್ಚಿನ ಗಮನ ನೀಡಬೇಕು. ಸೇವೆ ಮಾಡಬೇಕು ಎಂದರೆ ಅದಮ್ಯ ಚೇತನದಂತಹ ಸಂಸ್ಥೆಗಳ ಜೊತೆ ಕೈ ಜೋಡಿಸಿ ಎಂದು ಕರೆ ನೀಡಿದರು.
ಯಾವುದೇ ಲಾಭದ ಆಸೆ ಇಲ್ಲದೆ ನೀಡುತ್ತಿರುವ ಈ ಸೇವೆ ಶ್ಲಾಘನೀಯ. ಅದಮ್ಯ ಚೇತನ ಸಂಸ್ಥೆಯಿಂದ ಒಂದು ಗುರಿಗಾಗಿ ಕೆಲಸ ಮಾಡುತ್ತಿರುವುದು ಸಂತಸದಾಯಕವಾಗಿದೆ. ಮುಂದಿನ ಪೀಳಿಗೆಯ ಭವಿಷ್ಯ ಹಾಳಾದರೆ ನಮ್ಮ ಅರ್ಥಿಕತೆಗೂ ಹೊಡೆತ ಬೀಳುತ್ತದೆ. ಅಪೌಷ್ಠಿಕತೆ ಮಕ್ಕಳ ಭವಿಷ್ಯವನ್ನು ಹಾಳು ಮಾಡುತ್ತದೆ. ಇಂತಹ ಸಂಧರ್ಭದಲ್ಲಿ ಆದಮ್ಯ ಚೇತನ ಸಂಸ್ಥೆ ನೀಡುತ್ತಿರುವ ಕೊಡುಗೆ ಅಪಾರವಾದದ್ದು. ಶೂನ್ಯ ತ್ಯಾಜ್ಯ ಅಡುಗೆ ಮನೆ/ಹಸಿರು ಅಡುಗೆ ಮನೆ ಮಾಡಿರುವುದು ಸಣ್ಣ ಸಾಧನೆ ಅಲ್ಲ. ಅದಮ್ಯ ಚೇತನ ಇನ್ನೂ ಹಲವು ಕೆಲಸಗಳನ್ನ ಮಾಡುವಂತಾಗಲಿ ಎಂದು ತಿಳಿಸಿದರು.
ಅನಂತ್ ಕುಮಾರ್, ಸುಷ್ಮಾ ಸ್ವರಾಜ್ ಸೇರಿದಂತೆ ಹಲವು ಸ್ನೇಹಿತರು ನಮ್ಮನ್ನು ಅಗಲಿರುವುದು ದುಃಖಕರ ಸಂಗತಿ ಎಂದು ಇಬ್ಬರು ಅಗಲಿದ ನಾಯಕರನ್ನು ವೆಂಕಯ್ಯ ನಾಯ್ಡು ಇದೇ ವೇಳೆ ನೆನಪು ಮಾಡಿಕೊಂಡರು.
1 ಲಕ್ಷ ಊಟ
ಪ್ರತಿನಿತ್ಯ ಅಡುಗೆ ಕೇಂದ್ರಗಳಿಂದ 1 ಲಕ್ಷದ 50 ಸಾವಿರ ಮಕ್ಕಳಿಗೆ ರುಚಿಯಾದ, ಶುಚಿಯಾದ ಸ್ವಾದಿಷ್ಟ ಮಧ್ಯಾಹ್ನದ ಬಿಸಿಯೂಟವನ್ನು ಅದಮ್ಯ ಚೇತನ ಸಂಸ್ಥೆ ಸರಬರಾಜು ಮಾಡುತ್ತಿದೆ ಎಂದು ಸಂಸ್ಥೆಯ ಮುಖ್ಯಸ್ಥೆ ಡಾ.ತೇಜಸ್ವಿನಿ ಅನಂತಕುಮಾರ್ ತಿಳಿಸಿದರು.
ಬೆಂಗಳೂರು, ಹುಬ್ಬಳ್ಳಿ, ಕಲಬುರಗಿ ಮತ್ತು ರಾಜಸ್ತಾನದ ಜೋಧಪುರ್ ಅಡುಗೆ ಕೇಂದ್ರಗಳಿಂದ ಮಧ್ಯಾಹ್ನದ ಬಿಸಿಯೂಟವನ್ನು ಸರಬರಾಜು ಮಾಡುತ್ತಿದೆ ಎಂದರು.ಇದೊಂದು ಸೇವಾ ಸಂಸ್ಥೆಯಾಗಿದ್ದು, ಶಿಕ್ಷಣ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ಅನ್ನ-ಅಕ್ಷರ-ಆರೋಗ್ಯ ಎಂಬ ಮೂರು ಪ್ರಮುಖ ಪ್ರಕಲ್ಪಗಳಡಿಯಲ್ಲಿ ಸೇವಾನಿರತವಾಗಿದೆ. ಕೇಂದ್ರದ ಮಾಜಿ ಸಚಿವ ಅನಂತಕುಮಾರ್ ಅವರು ತಮ್ಮ ತಾಯಿ ಗಿರಿಜಾಶಾಸ್ತ್ರಿ ಅವರ ಸ್ಮರಣಾರ್ಥ ಅದಮ್ಯ ಚೇತನ ಸಂಸ್ಥೆಯನ್ನು 1997ರಲ್ಲಿ ಸ್ಥಾಪಿಸಿದರು ಎಂದು ನುಡಿದರು.2003ರಲ್ಲಿ ಆರಂಭವಾದ ಅನ್ನಪೂರ್ಣ ಬಿಸಿಯೂಟ ಯೋಜನೆಯಡಿಯಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರದ ಸಹಯೋಗದಲ್ಲಿ ಹಲವು ಕಡೆ ಶುಚಿಯಾದ ಸ್ವಾದಿಷ್ಟ ಮಧ್ಯಾಹ್ನದ ಬಿಸಿಯೂಟವನ್ನು ಸರಬರಾಜು ಮಾಡುತ್ತಿದೆ.
ಇದುವರೆಗೂ ಸುಮಾರು 47 ಕೋಟಿ ಊಟ ಸರಬರಾಜು ಮಾಡಿದ ಹೆಗ್ಗಳಿಕೆ ಅದಮ್ಯ ಚೇತನ ಸಂಸ್ಥೆಯದ್ದು. ಅನ್ನಪೂರ್ಣ ಅಡುಗೆ ಮನೆಯನ್ನು ಶೂನ್ಯ ತ್ಯಾಜ್ಯ ಅಡುಗೆ ಮನೆ ಎಂದು ಸಿದ್ಧಪಡಿಸಲಾಗಿದೆ. ಪರ್ಯಾಯ ಇಂಧನಗಳ ಕುರಿತು ಮಾಡಿದ ಸಂಶೋಧನೆಗಳಿಂದ ಜೈವಿಕ ತ್ಯಾಜ್ಯವನ್ನು ಅದಮ್ಯ ಚೇತನ ಸಮರ್ಥವಾಗಿ ಬಳಸಿಕೊಳ್ಳುತ್ತಿದೆ. ಇದರಿಂದಾಗಿ ಭಾರೀ ಪ್ರಮಾಣದಲ್ಲಿ ಫಾಸಿಲ್ ಇಂಧನವನ್ನು ಉಳಿತಾಯ ಮಾಡುತ್ತಿದ್ದು ಪ್ರತಿದಿನವೂ 75 ಎಲ್‌ಪಿಜಿ ಸಿಲಿಂಡರ್‌ಗಳಷ್ಟು ಮತ್ತು 750 ಲೀಟರ್ ಡೀಸೆಲ್‌ಗಳಷ್ಟು ಉಳಿತಾಯವಾಗುತ್ತಿದೆ ಎಂದು ಡಾ.ತೇಜಸ್ವಿನಿ ವಿವರಿಸಿದರು.ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವಥ್ ನಾರಾಯಣ, ಸಂಸದ ತೇಜಸ್ವಿ ಸೂರ್ಯ ಅವರಿದ್ದರು
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ