ಬೆಂಗಳೂರು
ಸುಳ್ವಾಡಿ ದೇವಾಲಯದ ವಿಷಪ್ರಸಾದ ಘಟನೆಯ ಹಿನ್ನೆಲೆಯಲ್ಲಿ ರಾಜ್ಯದ ದೇವಸ್ಥಾನಗಳಲ್ಲಿ ಅಗತ್ಯ ಎಚ್ಚರಿಕೆ ವಹಿಸುವುದಾಗಿ ಮುಜರಾಯಿ ಸಚಿವ ರಾಜಶೇಖರ್ ಪಾಟೀಲ್ ತಿಳಿಸಿದ್ದಾರೆ.
ಮೈಸೂರಿನ ಆಸ್ಪತ್ರೆಗಳಿಗೆ ಭೇಟಿ ನೀಡಿ ರೋಗಿಗಳ ಆರೋಗ್ಯ ವಿಚಾರಿಸಿದ ನಂತರ ಸುದ್ದಿಗಾರರಿಗೆ ಅವರು ಈ ವಿಷಯ ತಿಳಿಸಿದರು. ಸುಳ್ವಾಡಿ ದೇವಾಲಯ ಮುಜರಾಯಿ ಇಲಾಖೆಯ ವ್ಯಾಪ್ತಿಗೆ ಬರುವುದಿಲ್ಲ. ರಾಜ್ಯದಲ್ಲಿ 36 ಸಾವಿರದ 500 ದೇವಾಲಯಗಳು ಮುಜರಾಯಿ ವ್ಯಾಪ್ತಿಗೆ ಬರುತ್ತವೆ ಎಂದರು.
ಚಾಮುಂಡೇಶ್ವರಿ ದೇವಾಲಯದ ನೌಕರರ ವೇತನ ಹೆಚ್ಚಳಕ್ಕೆ ಸಂಬಂಧಪಟ್ಟಂತೆ ಇಲಾಖೆ ಆಯುಕ್ತರು ನೀಡಿರುವ ವರದಿಯ ಸಾಧಕ ಬಾಧಕ ಪರಿಶೀಲಿಸಿ ಕ್ರಮಕೈಗೊಳ್ಳಲಾಗುವುದು. ಈಗಾಗಲೇ ದೇವಾಲಯದ 95 ನೌಕರರಿಗೆ 6ನೇ ವೇತನ ಆಯೋಗದ ಶಿಫಾರಸ್ಸಿನಂತೆ ವೇತನ ನೀಡಲಾಗುತ್ತಿದ್ದು, ಉಳಿದವರಿಗೂ ಇದೇ ಮಾದರಿಯಲ್ಲಿ ವೇತನ ನೀಡುವ ಬಗ್ಗೆ ಆಯುಕ್ತರ ವರದಿ ಪರಿಶೀಲಿಸಿ ಕ್ರಮ ಕೈಗೊಳ್ಳುವುದಾಗಿ ಸಚಿವ ರಾಜಶೇಖರ್ ಪಾಟೀಲ್ ಹೇಳಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ