ಚಿತ್ರದುರ್ಗ:
ಮಹನೀಯರ ಜಯಂತಿಯನ್ನು ಕೇವಲ ಒಂದು ಸಮಾಜಕ್ಕೆ ಸೀಮಿತಗೊಳಿಸಬಾರದು. ಎಲ್ಲ ಸಮಾಜದವರು ಸೇರಿ ಜಯಂತಿ ಆಚರಿಸುವಂತಾಗಬೇಕು ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶಶಿಕಲಾ ಸುರೇಶ್‍ಬಾಬು ಅಭಿಪ್ರಾಯಪಟ್ಟರು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಜಿಲ್ಲಾಡಳಿತದ ವತಿಯಿಂದ ಆಯೋಜಿಸಿದ್ದ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕೋವಿಡ್-19 ಸಾಂಕ್ರಾಮಿಕ ರೋಗವು ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಸರ್ಕಾರದ ಮಾರ್ಗಸೂಚಿಯಂತೆ ಜಯಂತಿಯನ್ನು ಸರಳವಾಗಿ ಆಚರಿಸಲಾಗುತ್ತಿದೆ. ನಾರಾಯಣ ಗುರುಗಳು ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿ, ಶಿಕ್ಷಣ ತಜ್ಞ ಎಂದು ಹೆಸರು ಪಡೆದಿದ್ದರು. ಸಮಾಜದಲ್ಲಿ ಎಲ್ಲರೂ ಸಮಾನರು ಎಂಬ ಸಂದೇಶ ಸಾರುವ ಮೂಲಕ ಸಾಮಾನತೆಗಾಗಿ ಹೋರಾಟ ಮಾಡಿದರು. ಅಸ್ಪøಶ್ಯತೆ ವಿರುದ್ಧ ಹೋರಾಟ ಮಾಡಿ, ಶೋಷಿತ ಸಮಾಜ ಸುಧಾರಣೆಗಾಗಿ ಜೀವನವಿಡೀ ಶ್ರಮಿಸಿದ್ದಾರೆ ಎಂದು ಬಣ್ಣಿಸಿದರು.
ಅಂಬೇಡ್ಕರ್ ಜಯಂತಿ, ವಾಲ್ಮೀಕಿ ಜಯಂತಿ, ಬಸವಜಯಂತಿ ಹೀಗೆ ಎಲ್ಲ ಜಯಂತಿಗಳು ಸಹ ಮಹನೀಯರಿಗೆ ಗೌರವ ಸಲ್ಲಿಸಲು ಆಚರಣೆ ಮಾಡಲಾಗುತ್ತಿದೆ. ಇಂತಹ ಮಹನೀಯರನ್ನು ಒಂದು ಸಮಾಜಕ್ಕೆ ಸೀಮಿತಗೊಳಿಸದೇ ಅವರ ತತ್ವ, ಆದರ್ಶಗಳನ್ನು ಪ್ರತಿಯೊಬ್ಬರು ನಿತ್ಯಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ, ಅಪರ ಜಿಲ್ಲಾಧಿಕಾರಿ ಸಿ.ಸಂಗಪ್ಪ, ಉಪವಿಭಾಗಾಧಿಕಾರಿ ಪ್ರಸನ್ನ, ತಹಶೀಲ್ದಾರ್ ವೆಂಕಟೇಶಯ್ಯ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ನಿಜಲಿಂಗಪ್ಪ, ರಂಗನಿರ್ದೇಶಕ ಕೆಪಿಎಂ ಗಣೇಶಯ್ಯ, ಈಡಿಗ ಸಮಾಜದ ಅಧ್ಯಕ್ಷ ಜೀವನ್, ಪದಾಧಿಕಾರಿಗಳಾದ ಸತ್ಯನಾರಾಯಣ, ಮಂಜುನಾಥ್, ಮಹಂತೇಶ್, ತಿಪ್ಪೇಸ್ವಾಮಿ, ಚಂದ್ರಶೇಖರ್, ಕಾಂತರಾಜು ಉಪಸ್ಥಿತರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
