ದಾವಣಗೆರೆ:
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಸಂಸದ ಡಿ.ಕೆ.ಸುರೇಶ್ ಮನೆ ಮೇಲೆ ಸಿಬಿಐ ದಾಳಿ ನಡೆಸಿರೋದು ದ್ವೇಷದ ರಾಜಕಾರಣಕ್ಕೆ ಹಿಡಿದ ಕೈಗನ್ನಡಿ ಎಂದು ಕೆಪಿಸಿಸಿ ಮಹಿಳಾ ಘಟಕದ ರಾಜ್ಯ ಕಾರ್ಯದರ್ಶಿ ಶ್ರೀಮತಿ ಎಂ.ಪಿ.ಲತಾ ಮಲ್ಲಿಕಾರ್ಜುನ ಅವರು ಸಿಬಿಐ ದಾಳಿಯನ್ನು ಖಂಡಿಸಿದ್ದಾರೆ.
ರಾಜ್ಯದಲ್ಲಿ ಉಪಚುನಾವಣೆಗೆ ಸಿದ್ಧತೆ ನಡೆಸುತ್ತಿರುವಾಗಲೇ ಸಿಬಿಐ ಅಧಿಕಾರಿಗಳು ದಾಳಿ ನಡೆಸಿರೋದು ರಾಜಕೀಯ ಪ್ರೇರಿತ. ಈ ಹಿಂದೆ ಕೂಡ ಹೀಗೆಯೇ ಆಗಿತ್ತು. ಬಿಜೆಪಿ ನಾಯಕರು ತಮ್ಮ ದ್ವೇಷದ ರಾಜಕಾರಣಕ್ಕೆ ತಕ್ಕ ಬೆಲೆ ತೆರುವ ದಿನ ದೂರವಿಲ್ಲ. ದಾಳಿಯಿಂದ ಕಾಂಗ್ರೆಸ್ ಕಾರ್ಯಕರ್ತರು ಆತ್ಮಸ್ಥೈರ್ಯ ಕಳೆದುಕೊಂಡಿಲ್ಲ, ಬದಲಿಗೆ ಇನ್ನಷ್ಟು ಸದೃಢವಾಗಿದ್ದು, ಬೆಂಗಳೂರು ಆರ್‍ಆರ್ ನಗರ ಮತ್ತು ಶಿರಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತ ಎಂದಿದ್ದಾರೆ.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಂಚಿನ ದಾಳಿಯ ಮೂಲಕ ಕಾಂಗ್ರೆಸ್ ನಾಯಕರ ಮಾನಸಿಕ ಸ್ಥೈರ್ಯ ಕಸಿದುಕೊಳ್ಳಲು ಸಾಧ್ಯವಿಲ್ಲ. ಕಾಂಗ್ರೆಸ್ ಪಕ್ಷ ಸದೃಢವಾಗಿದ್ದು, ತಳಮಟ್ಟದಿಂದ ಪಕ್ಷ ಸಂಘಟನೆಗೊಂಡಿರುವುದು ಬಿಜೆಪಿ ನಾಯಕರಿಗೆ ದಿಗಿಲು ಹುಟ್ಟಿಸಿದೆ. ಹೀಗಾಗಿ ಸೋಲಿನ ಭೀತಿಯಿಂದ ಅಧಿಕಾರಿಗಳನ್ನು ಬಳಸಿಕೊಂಡು ದಾಳಿ ಮಾಡಿಸುವ ಮೂಲಕ ನಾಯಕರನ್ನು ವಿಚಲಿತಗೊಳಿಸಲು ಯತ್ನಸುತ್ತಿರುವ ಬಿಜೆಪಿ ಸಂಚು ಫಲ ನೀಡುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
